ಉಡುಪಿ: ಸಂತೆಕಟ್ಟೆಯಲ್ಲಿ ಓವರ್ ಪಾಸ್ ಕಾಮಗಾರಿ: ಇಲಾಖಾಧಿಕಾರಿಗಳೊಂದಿಗೆ ಶಾಸಕ ರಘುಪತಿ ಭಟ್ ಸಭೆ
Tuesday, January 3, 2023
ಉಡುಪಿ (Headlines Kannada): ರಾಷ್ಟ್ರೀಯ ಹೆದ್ದಾರಿ - 66 ರ ಕಲ್ಯಾಣಪುರ ಸಂತೆಕಟ್ಟೆ ಜಂಕ್ಷನ್ ಬಳಿ ಟ್ರಾಫಿಕ್ ಸಮಸ್ಯೆ ತಪ್ಪಿಸಲು ಓವರ್ ಪಾಸ್ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು, ಕಾಮಗಾರಿ ತಕ್ಷಣದಲ್ಲಿ ಆರಂಭಿಸುವ ಬಗ್ಗೆ ಇಂದು ಶಾಸಕ ಕೆ. ರಘುಪತಿ ಭಟ್ ಅವರು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈ ರಸ್ತೆಯಲ್ಲಿ ವಾಹನ ದಟ್ಟಣೆ ಅಧಿಕವಾಗಿರುವುದರಿಂದ ಕಾಮಗಾರಿ ಆರಂಭಗೊಂಡ ನಂತರ ಸಮರ್ಪಕವಾಗಿ ಟ್ರಾಫಿಕ್ ನಿರ್ವಹಣೆ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಪೋಲಿಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ, ನಗರ ಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ಉಡುಪಿ ತಹಶೀಲ್ದಾರರಾದ ಮಹೇಶ್ ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿಯಂತರು ಮತ್ತು ಗುತ್ತಿಗೆದಾರರು ಉಪಸ್ಥಿತರಿದ್ದರು.