ಕಾರ್ಕಳ ಮಾಳ ಗ್ರಾಮದಲ್ಲಿ ಉಸಿರಾಟದ ಸಮಸ್ಯೆ ಉಲ್ಬಣಿಸಿ ವ್ಯಕ್ತಿ ಸಾ#ವು

ಕಾರ್ಕಳ ಮಾಳ ಗ್ರಾಮದಲ್ಲಿ ಉಸಿರಾಟದ ಸಮಸ್ಯೆ ಉಲ್ಬಣಿಸಿ ವ್ಯಕ್ತಿ ಸಾ#ವುಕಾರ್ಕಳ (Headlines Kannada): ಉಸಿರಾಟದ ಸಮಸ್ಯೆ ಉಲ್ಬಣಗೊಂಡು ವ್ಯಕ್ತಿಯೊಬ್ಬರು ಮೃ#ತಪಟ್ಟ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. 

ಮೃ#ತರನ್ನು ಮಾಳ ಗ್ರಾಮದ ನಿವಾಸಿ 66ವರ್ಷದ ಕೆ. ಪೂವಯ್ಯ ಎಂದು ಗುರುತಿಸಲಾಗಿದೆ. ಇವರು ನಾಲ್ಕು ದಿನದಿಂದ ಜ್ವರದಿಂದ ಬಳಲುತ್ತಿದ್ದರು. ಬಜಗೋಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆದುಕೊಂಡು ಬರಲಾಗಿದೆ. ಇಂದು ಮುಂಜಾನೆ ಏಕಾಏಕಿ‌ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ತಕ್ಷಣವೇ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಪೂವಯ್ಯ ನಾಯ್ಕ್ ಅವರು ಮೃ#ತ ಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article