ಮಂಗಳೂರಿನಲ್ಲಿ ಗಾಂ#ಜಾ‌ ದಂ#ಧೆ: ವೈದ್ಯಕೀಯ ಕಾಲೇಜಿನ ವೈದ್ಯರು‌, ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 10 ಮಂದಿ ಬಂ#ಧನ

ಮಂಗಳೂರಿನಲ್ಲಿ ಗಾಂ#ಜಾ‌ ದಂ#ಧೆ: ವೈದ್ಯಕೀಯ ಕಾಲೇಜಿನ ವೈದ್ಯರು‌, ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 10 ಮಂದಿ ಬಂ#ಧನ

ಮಂಗಳೂರು: ಮಂಗಳೂರು ನಗರದಲ್ಲಿ ಗಾಂ#ಜಾ ಮಾರಾಟಕ್ಕೆ ಸಂಬಂಧಿಸಿದಂತೆ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವೈದ್ಯರು‌ ಹಾಗೂ ವೈದ್ಯಕೀಯ ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 10 ಮಂದಿಯನ್ನು ಪೊಲೀಸರು ಬಂ#ಧಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ N.ಶಶಿಕುಮಾರ್ ತಿಳಿಸಿದ್ದಾರೆ.

ಮಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ವೈದ್ಯರು ಮತ್ತು ವಿದ್ಯಾರ್ಥಿಗಳು ಈ ಗಾಂ#ಜಾ ದಂ#ಧೆಯಲ್ಲಿ ಭಾಗಿಯಾಗಿದ್ದಾರೆ. ಗಾಂ#ಜಾ ಸೇವನೆ ಮತ್ತು ಗಾಂ#ಜಾ ಪೆ#ಡ್ಲಿಂಗ್ ಪ್ರಕರಣದಲ್ಲಿ 2 ಮಂದಿ  ವೈದ್ಯರು, 4 ಮಂದಿ ವೈದ್ಯಕೀಯ ವಿದ್ಯಾರ್ಥಿನಿಯರು, ಇಬ್ಬರು ವಿದ್ಯಾರ್ಥಿಗಳು ಸೇರಿ ಒಟ್ಟು 10 ಜನ ಭಾಗಿಯಾಗಿದ್ದಾರೆ‌ ಎಂದು ಅವರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ UK  ಮೂಲದ ಗಾಂ#ಜಾ ಪೆಡ್ಲರ್ ನೀಲ್ ಕಿಶೋರಿಲಾಲ್ ರಾಮ್ ಜೀ (38) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಮತ್ತಷ್ಟು ಸ್ಫೋ#ಟಕ ವಿಚಾರ ಬೆಳಕಿಗೆ ಬಂದಿದೆ. ನೀಲ್ ಕಿಶೋರಿಲಾಲ್ ರಾಮ್‌ನ ಮಾಹಿತಿ ಆಧಾರದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯರು, ವಿದ್ಯಾರ್ಥಿಗಳು ಮತ್ತು ವೈದ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವೈದ್ಯರಾದ ಡಾ.ಸಮೀರ್(32), ಮಣಿ‌ಮಾರನ್ ಮುತ್ತು(28),  ವಿದ್ಯಾರ್ಥಿನಿಯರಾದ ಡಾ. ನದಿಯಾ ಸಿರಾಜ್(24), ಡಾ.ವರ್ಷಿಣಿ ಪ್ರತಿ (26), ಡಾ.ರಿಯಾ ಚಡ್ಡ(22), ಡಾ. ಹೀರಾ ಬಸಿನ್(23), ವಿದ್ಯಾರ್ಥಿಗಳಾದ ಡಾ. ಭಾನು ದಹಿಯಾ (27), ಡಾ.ಕ್ಷಿತಿಜ್ ಗುಪ್ತ (23), ಸ್ಥಳೀಯ ಮಹಮ್ಮದ್ ರವೂಫ್‌ ಅಲಿಯಾಸ್ ಗೌಸ್ (34)ನನ್ನು ಬಂಧಿಸಲಾಗಿದೆ ಎಂದು ಹೇಳಿರುವ ಪೊಲೀಸರು, ಈ ವೇಳೆ ಆರೋಪಿಗಳ ಬಳಿಯಿದ್ದ 2 ಕೆ.ಜಿ‌ ಗಾಂ#ಜಾ, ಒಂದು ನಕಲಿ ಪಿ#ಸ್ತೂಲ್, ಡ್ರಾ#ಗರ್ ವಶಕ್ಕೆ ಪಡೆಯಲಾಗಿದೆ ಎಂದಿದ್ದಾರೆ.

Ads on article

Advertise in articles 1

advertising articles 2

Advertise under the article