ಈ ಬಾರಿಯ ಗಣರಾಜ್ಯೋತ್ಸವದ ಪರೇಡ್'ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಕೊನೆಗೂ ಸಿಕ್ಕಿತು ಅವಕಾಶ!

ಈ ಬಾರಿಯ ಗಣರಾಜ್ಯೋತ್ಸವದ ಪರೇಡ್'ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಕೊನೆಗೂ ಸಿಕ್ಕಿತು ಅವಕಾಶ!



ಬೆಂಗಳೂರು(Headlineskannada): ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ಈ ಬಾರಿಯ ಗಣರೋಜ್ಯೋತ್ಸವದ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಕೊನೆಗೂ ಅವಕಾಶ ನೀಡಲಾಗಿದೆ.

ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ ನಿರಾಕರಣೆ ಮಾಡಿದ್ದ ಕೇಂದ್ರ ಸರಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಜೊತೆಗೆ ಕಾರನಾಟಕವನ್ನು ಕಡೆಗಣನೆ ಮಾಡಲಾಗುತ್ತಿದೆ ಎಂಬ ಆರೋಪವು ಕೇಳಿಬಂದಿತ್ತು. 

ಈ ಬಾರಿಯ ಗಣರೋಜ್ಯೋತ್ಸವದ ಪರೇಡ್'ಗೆ ಆಯ್ಕೆ ಮಾಡಲಾಗಿದ್ದ ಪದ್ಮಶ್ರಿ ಪ್ರಶಸ್ತಿ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ, ಸಾಲುಮರದ ತಿಮ್ಮಕ್ಕ ಹಾಗು  ತುಳಸಿಗೌಡ ಹಾಲಕ್ಕಿ ಅವರ ಸಾಧನೆಗಳನ್ನು ಬಿಂಬಿಸುವ ಕರ್ನಾಟಕದ 'ನಾರಿ ಶಕ್ತಿ ವಿಷಯದ ಸ್ತಬ್ಧ ಚಿತ್ರವನ್ನು ಅಂತಿಮ ಹಂತದಲ್ಲಿ ಕೇಂದ್ರ ಸರ್ಕಾರ ಕೈ ಬಿಟ್ಟಿತ್ತು. ಕೇಂದ್ರರ ಈ ನಡೆಗೆ ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ರಾಜ್ಯಾದ್ಯಂತ ತೀವ್ರ ಜನಾಕ್ರೋಶ ವ್ಯಕ್ತವಾಗಿತ್ತು.

ಈ ಸಂಬಂಧ ನಡೆದ 4 ಸಭೆಗಳಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಸಂಬಂಧ ಒಪ್ಪಿಗೆ ಸೂಚಿಸಿದ ಕೇಂದ್ರ ಸರ್ಕಾರ, 5ನೇ ಸಭೆಯಲ್ಲಿ ಕರ್ನಾಟಕವನ್ನು ಕೈಬಿಟ್ಟಿತ್ತು.  ಬೇರೆ  ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅವಕಾಶ ಕಲ್ಪಿಸಬೇಕೆಂಬ ಉದ್ದೇಶದಿಂದ ಕರ್ನಾಟಕವನ್ನು ಕೈ ಬಿಡಲಾಗಿದೆ ಎಂದು ಹೇಳಲಾಗಿತ್ತು. ಕೇಂದ್ರ ಬಿಜೆಪಿ ಸರಕಾರದ ಈ ನಡೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ತೀವ್ರ ಟೀಕೆಗೆ ಗುರಿಯಾಗಿತ್ತು. ಕಾಂಗ್ರೆಸ್ ಹಾಗು ಇಯಾತರ ಪಕ್ಷಗಳ ಆಕ್ರೋಶದ ಬಳಿಕ ಕೊನೆ ಕ್ಷಣ ಕ್ಷಣದಲ್ಲಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡಲಾಗಿದೆ. 

Ads on article

Advertise in articles 1

advertising articles 2

Advertise under the article