ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಮಹಿಳಾ ಘಟಕದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ
Monday, January 2, 2023
ಉಡುಪಿ (Headlines Kannada): ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಮಹಿಳಾ ಘಟಕದ ಸಭೆಯು ನಗರದಲ್ಲಿರುವ ವೇದಿಕೆಯ ಕಚೇರಿಯಲ್ಲಿ ರವಿವಾರ ನಡೆಯಿತು.
ವೇದಿಕೆಯ ಜಿಲ್ಲಾಧ್ಯಕ್ಷ ಸುಜಯ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ನೂತನ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಕೃಷ್ಣ ಪಾಂಗಳ ನೇತೃತ್ವದಲ್ಲಿ ಸಭೆ ಜರುಗಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯಕ್ ಅವರು ಜ.22ರಂದು ನಡೆಯುವ ಸಮಾವೇಶದ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ನೂತನ ಜಿಲ್ಲಾ ಮಹಿಳಾ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷರಾಗಿ ದೇವಕಿ ಬಾರ್ಕೂರು ಮತ್ತು ಶಾಲಿನಿ, ಕಾರ್ಯದರ್ಶಿಯಾಗಿ ಅನುಷಾ ಆಚಾರ್ ಪಳ್ಳಿ ಮತ್ತು ನಮೃತಾ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುಲತಾ ಅವರನ್ನು ನೇಮಿಸಲಾಯಿತು. ಬಳಿಕ ನೂತನ ಪದಾಧಿಕಾರಿಗಳನ್ನು ಗೌರವಿಸಲಾಯಿತು. ಅನುಷಾ ಆಚಾರ್ ಪಳ್ಳಿ ವಂದಿಸಿದರು.