
ಮಂಗಳೂರಿನಲ್ಲಿ ಗಾಂ#ಜಾ ದಂ#ಧೆ; ಇಬ್ಬರು ವೈದ್ಯರು, ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಕೆಎಂಸಿ
ಮಂಗಳೂರು(Headlineskannada): ಮಂಗಳೂರಿನಲ್ಲಿ ಗಾಂ#ಜಾ ಜಾ#ಲ ಪ್ರಕರಣದಲ್ಲಿ ವೈದ್ಯರ ಬಂಧನ ಪ್ರಕರಣಕ್ಕೆ ಸಂಬಂಧಿಸಿ KMC ಆಸ್ಪತ್ರೆ ಆಡಳಿತ ಮಂಡಳಿ ಇಬ್ಬರು ವೈದ್ಯರನ್ನು ಹಾಗು 7 ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ವಜಾಗೊಳಿಸಿದೆ.
ಗಾಂ#ಜಾ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಅತ್ತಾವರ KMC ಆಸ್ಪತ್ರೆ ಮೆಡಿಕಲ್ ಆಫೀಸರ್ ಡಾ.ಸಮೀರ್, ಮಣಿಪಾಲ KMC ಆಸ್ಪತ್ರೆ ಮೆಡಿಕಲ್ ಸರ್ಜನ್ ಡಾ.ಮಣಿಮಾರನ್ ಅವರನ್ನು ಆಡಳಿತ ಮಂಡಳಿ ವಜಾ ಮಾಡಿ ಗುತ್ತಿಗೆ ರದ್ದುಪಡಿಸಿದೆ.
ಜೊತೆಗೆ ವೈದ್ಯಕೀಯ ವಿದ್ಯಾರ್ಥಿಗಳಾದ ಡಾ. ಕಿಶೋರಿಲಾಲ್, ಡಾ. ನದೀಯಾ ಸಿರಾಜ್, ಡಾ. ವರ್ಷಿಣಿ ಪತ್ರಿ, ಡಾ. ರಿಯಾ ಚಡ್ಡ, ಡಾ. ಇರಾ ಬಾಸಿನ, ಡಾ. ಕ್ಷಿತಿಜ್ ಗುಪ್ತಾ, ಡಾ. ಹರ್ಷ ಕುಮಾರ್ ವಿ.ಎಸ್. ಅವರನ್ನು ಅಮಾನತು ಮಾಡಲಾಗಿದೆ.
ಇತ್ತೀಚಿಗೆ ಮಂಗಳೂರಿನಲ್ಲಿ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ಗಾಂ#ಜಾ ದಂ#ಧೆ ಮತ್ತು ಗಾಂ#ಜಾ ಸೇವನೆ ಪ್ರಕರಣ ಭಾರೀ ಸಂಚಲನ ಸೃಷ್ಟಿಸಿತ್ತು. ಇದೀಗ KMC ಆಸ್ಪತ್ರೆ ಆಡಳಿತ ಮಂಡಳಿ ಇಬ್ಬರು ವೈದ್ಯರನ್ನು ವಜಾ ಮಾಡಿ ಗುತ್ತಿಗೆ ರದ್ದುಪಡಿಸಿದೆ. ಜೊತೆಗೆ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಆಸ್ಪತ್ರೆಯಿಂದ ಅಮಾನತು ಮಾಡಿದೆ.
ಮಂಗಳೂರು ಕಮಿಷನರ್ ಕಚೇರಿಗೆ ಆಗಮಿಸಿರುವ KMC ಡೀನ್ ಉನ್ನಿಕೃಷ್ಣನ್ ಗಾಂ#ಜಾ ಪ್ರಕರಣಕ್ಕೆ ಸಂಬಂಧಿಸಿ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡ ಬಗ್ಗೆ ಪೊಲೀಸ್ ಕಮಿಷನರ್‌ಗೆ ಮಾಹಿತಿ ನೀಡಿದ್ದಾರೆ.