ಮಹಾತ್ಮ ಗಾಂಧೀಜಿಯವರ ಪುಣ್ಯ ಸ್ಮರಣೆ; ಪ್ರಧಾನಿ ಮೋದಿ ಟ್ವೀಟ್
Monday, January 30, 2023
ನವದೆಹಲಿ(Headlines Kannada): ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯ ಸ್ಮರಣೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಮಹಾತ್ಮ ಗಾಂಧೀಜಿಯವರ ಅವರ ಪುಣ್ಯ ತಿಥಿಯಂದು ಅವರಿಗೆ ಪ್ರಣಾಮಗಳು. ಅವರ ಆಳವಾದ ಆಲೋಚನೆಗಳನ್ನು ನಾನು ನೆನಪಿಸಿಕೊಳ್ಳುತ್ತೇನೆ. ರಾಷ್ಟ್ರ ಸೇವೆಯಲ್ಲಿ ಹುತಾತ್ಮರಾದ ಎಲ್ಲರಿಗೂ ಈ ಸಂದರ್ಭದಲ್ಲಿ ಗೌರವ ಸಲ್ಲಿಸುವುದಾಗಿ ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಹುತಾತ್ಮರ ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ ಹಾಗು ಭಾರತದ ಅಭಿವೃದ್ಧಿಗಾಗಿ ಕೆಲಸ ಮಾಡುವ ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ ಎಂದಿದ್ದಾರೆ.