
ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಗಾಂ#ಜಾ ಪ್ರಕರಣ: ವೈದ್ಯರು, ವೈದ್ಯಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 9 ಮಂದಿ ಬಂಧನ
ಮಂಗಳೂರು: ಮಂಗಳೂರಿನಲ್ಲಿ ಗಾಂ#ಜಾ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ವೈದ್ಯರು ಹಾಗೂ 7 ವೈದ್ಯಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರ KMC ಆಸ್ಪತ್ರೆಯ ಆಡಳಿತ ಮಂಡಳಿ ಇಬ್ಬರು ವೈದ್ಯರು ಸೇರಿ 9 ಮಂದಿಯನ್ನು ಅಮಾನತು ಮಾಡಿದ ಬೆನ್ನಲ್ಲೇ ಈಗ ಈ ಪ್ರಕರಣದಲ್ಲಿ ಮತ್ತೆ 9 ಮಂದಿ ಬಂಧನವಾಗಿದೆ.
ಬಂಧಿತರನ್ನು ಡಾ. ಸಿದ್ದಾರ್ಥ್ ಪಾವಸ್ಕರ್, ಡಾ. ಸೂರ್ಯಜಿತ್ ದೇವ್, ಡಾ. ಪ್ರಣಯ್ ನಟರಾಜ್, ಡಾ. ಚೈತನ್ಯ ತುಮುಲುರಿ, ಡಾ. ಸುಧೀಂದ್ರ, ಡಾ. ಇಶ್ ಮಿಡ್ಡಾ, ಡಾ. ವಿದುಷ್ ಕುಮಾರ್, ಡಾ. ಶರಣ್ಯಾ, ಡಾ. ಆಯಿಷಾ ಮಹಮ್ಮದ್ ಎಂದು ಗುರುತಿಸಲಾಗಿದೆ.
ಇವರೆಲ್ಲರೂ ಮಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಪದವಿ ಪಡೆಯುತ್ತಿದ್ದಾರೆ. ಬಂಧಿತರ ಪೈಕಿ ಡಾ. ಶರಣ್ಯಾ ಬಿಡಿಎಸ್ ವಿದ್ಯಾರ್ಥಿನಿಯಾಗಿದ್ದರೆ, ಉಳಿದವರು ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದಾರೆ.
ಪೊಲೀಸರು ಬಂಧಿಸಿರುವವರಲ್ಲಿ ಇಬ್ಬರು ವೈದ್ಯರು, 7 ಮಂದಿ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದಾರೆ. ಈ ಗಾಂ#ಜಾ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಡಾ.ಕಿಶೋರಿಲಾಲ್ ರಾಮ್ ಜೀಯೊಂದಿಗೆ ಸಂಪರ್ಕ ಹೊಂದಿದ್ದ ಗಾಂ#ಜಾ ಪೆಡ್ಲರ್‌ಗಳು ಫೋನ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.