ಪ್ರಧಾನಿ ಮೋದಿ ಬಗ್ಗೆ BBC ನಿರ್ಮಿಸಿರುವ ಸಾಕ್ಷ್ಯಚಿತ್ರ; ಕೇಂದ್ರ ಸರಕಾರದಿಂದ ಟ್ವೀಟ್ ಗಳಿಗೆ ನಿರ್ಬಂಧ!
ನವದೆಹಲಿ(Headlines Kannada): ಬಿಬಿಸಿ ಸುದ್ದಿ ಸಂಸ್ಥೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ನಿರ್ಮಿಸಿರುವ ಸಾಕ್ಷ್ಯಚಿತ್ರ 'India the modi question..'(ಇಂಡಿಯಾ: ದಿ ಮೋದಿ ಕ್ವಷ್ಚನ್) ಬಗ್ಗೆ ಭಾರೀ ವಿವಾದದ ಅಲೆ ಎಬ್ಬಿದ್ದು, ಇತ್ತ ಕೇಂದ್ರ ಸರ್ಕಾರ ಬಿಬಿಸಿ ಡಾಕ್ಯುಮೆಂಟರಿ ಕುರಿತ ಟ್ವೀಟ್ ಗಳಿಗೆ ನಿರ್ಬಂಧ ಹೇರಿದೆ.
ಪ್ರಧಾನಿ ಮೋದಿ ಕುರಿತ ವಿಮರ್ಶಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ಕುರಿತ ಟ್ವೀಟ್‌ಗಳನ್ನು ಕೇಂದ್ರ ಸರ್ಕಾರ ಇಂದು ನಿರ್ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ. 2002ರ ಗುಜರಾತ್ ಗ#ಲಭೆ ಹಾಗು ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರವು ಟ್ವಿಟರ್ ಹಾಗು ಯೂಟ್ಯೂಬ್‌ಗೆ ಸೂಚನೆ ನೀಡಿದೆ ಎಂದು ಹೇಳಲಾಗಿದೆ.
ಈ ಡಾಕ್ಯುಮೆಂಟರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತದ ಮುಸ್ಲಿಂ ಅಲ್ಪಸಂಖ್ಯಾತರ ಕುರಿತು ಇರುವ ಧೋರಣೆಯನ್ನ ಬಿಂಬಿಸಲಾಗಿದೆಯಂತೆ. 2002ರಲ್ಲಿ ಗುಜರಾತಿನಲ್ಲಿ ಸಂಭವಿಸಿದ ಗೋಧ್ರೋತ್ತರ ಗ#ಲಭೆ ಕುರಿತ ಮಾಹಿತಿ ಇದ್ದು, ಎಲ್ಲಕ್ಕಿಂತಾ ಹೆಚ್ಚಾಗಿ ಈ ಗಲಭೆಯಲ್ಲಿ ಮೋದಿ ಅವರ ಪಾತ್ರದ ಉಲ್ಲೇಖ ಇದ್ಯಂತೆ. ಈ ಗಲಭೆ ನಡೆದಾಗ ಮೋದಿ ಅವರು ಗುಜರಾತಿನ ಮುಖ್ಯಮಂತ್ರಿ ಆಗಿದ್ದರು. ಇನ್ನು ಗ#ಲಭೆ ನಂತರ ನಡೆದ ತನಿಖೆಗಳ ಬಗ್ಗೆ ಕೂಡಾ ಈ ಸಾಕ್ಷ್ಯಚಿತ್ರದಲ್ಲಿ ಉಲ್ಲೇಖ ಇದೆಯೆನ್ನಲಾಗಿದೆ.
"ಇಂಡಿಯಾ: ದಿ ಮೋದಿ ಕ್ವಷ್ಚನ್" ಎಂಬ ಶೀರ್ಷಿಕೆಯ ಸಾಕ್ಷ್ಯಚಿತ್ರದ ಅನೇಕ ಟ್ವೀಟ್‌ಗಳು ಹಾಗು ಯೂಟ್ಯೂಬ್ ವೀಡಿಯೊಗಳು ಇನ್ನು ಮುಂದೆ ಮೈಕ್ರೋಬ್ಲಾಗಿಂಗ್ ಹಾಗು ವೀಡಿಯೊ-ಹಂಚಿಕೆ ವೆಬ್‌ಸೈಟ್‌ಗಳಲ್ಲಿ ಕಾಣಿಸುವುದಿಲ್ಲ ಎಂದು ಹೇಳಲಾಗಿದೆ.