ಮೋದಿ ಕಾರ್ಯಕ್ರಮಕ್ಕೆ ಕನಿಷ್ಠ 100 ಮಕ್ಕಳನ್ನು ಕರೆತರುವಂತೆ ಆದೇಶಿಸಿ ಶಿಕ್ಷಣ ಇಲಾಖೆ ಪತ್ರ; ಟೀಕೆ ವ್ಯಕ್ತವಾಗುತ್ತಿದ್ದಂತೆ ಸುತ್ತೋಲೆ ಹಿಂಪಡೆದ ಶಿಕ್ಷಣ ಇಲಾಖೆ
Wednesday, January 11, 2023
ಹುಬ್ಬಳ್ಳಿ(Headlineskannada): ಗುರುವಾರ ಹುಬ್ಬಳ್ಳಿಯಲ್ಲಿ ನಡೆಯಲಿರುವ ಯುವಜನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಜಿಲ್ಲೆಯ ಎಲ್ಲಾ PU ಕಾಲೇಜುಗಳಿಂದ ಕನಿಷ್ಠ 100 ಮಕ್ಕಳನ್ನು ಕರೆತರಬೇಕೆಂದು ಆದೇಶ ಹೊರಡಿಸಿ ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪತ್ರ ಬರೆದಿದ್ದರು.
ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಬರೆದ ಈ ಪತ್ರ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆ ಸಾರ್ವಜನಿಕರಿಂದ ತೀವ್ರ ಟೀಕೆ ವ್ಯಕ್ತವಾಗಿದ್ದು, ಬಳಿಕ ಪಿಯು ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹಿಂತೆಗೆದುಕೊಂಡಿದೆ. 'ಇದು ಕಣ್ತಪ್ಪಿನಿಂದಾಗಿ ಪ್ರಕಟವಾಗಿದ್ದು, ಇಚ್ಛೆಯುಳ್ಳ ವಿದ್ಯಾರ್ಥಿಗಳು ನಾಳಿನ ಪ್ರಧಾನ ಮಂತ್ರಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು' ಎಂದು ಸಮಜಾಯಿಷಿ ನೀಡಿದೆ.
ಈ ಹಿಂದೆ ಬೆಂಗಳೂರಿನಲ್ಲಿ ಕಳೆದ ನವೆಂಬರ್ ನಲ್ಲಿ ಇದೇ ರೀತಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿ ಬಳಿಕ ಸಾರ್ವಜನಿಕರಿಂದ ಟೀಕೆ ವ್ಯಕ್ತವಾದ ನಂತರ ಹಿಂತೆಗೆದುಕೊಂಡ ಘಟನೆ ನಡೆದಿತ್ತು.