ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ; ರಾಜ್ಯಪಾಲ, ಮುಖ್ಯಮಂತ್ರಿ ಸೇರಿದಂತೆ ಕೇಂದ್ರ-ರಾಜ್ಯ ಸಚಿವರಿಂದ ಭವ್ಯ ಸ್ವಾಗತ

ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ; ರಾಜ್ಯಪಾಲ, ಮುಖ್ಯಮಂತ್ರಿ ಸೇರಿದಂತೆ ಕೇಂದ್ರ-ರಾಜ್ಯ ಸಚಿವರಿಂದ ಭವ್ಯ ಸ್ವಾಗತ

ಕಲಬುರಗಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಲಬುರಗಿಗೆ ಬಂದಿಳಿದಿದ್ದು, ಕಲ್ಯಾಣ ಕರ್ನಾಟಕದಲ್ಲಿ ಸಂಚಲನ ಮೂಡಿಸಿದೆ.  ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬಂದಿಳಿದ ಅವರನ್ನು ರಾಜ್ಯಪಾಲ ತಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ನಾಯಕರು, ಕೇಂದ್ರ ಸಚಿವರು ಭವ್ಯ ಸ್ವಾಗತ ಕೋರಿದರು. 

ಇಲ್ಲಿಂದ ಪ್ರಧಾನಿ ಮೋದಿಯವರು ಯಾದಗಿರಿ ಜಿಲ್ಲೆ ಹುಣಸಗಿ ತಲೂಕು ಕೊಡೆಕಲ್‌ ಹೆಲಿಪ್ಯಾಡ್‌ಗೆ ತೆರಳಲಿದ್ದಾರೆ. ಅಲ್ಲಿ ಅವರು ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಹಾಗು ಆಧುನೀಕರಣ ಕಾಮಗಾರಿ ಲೋಕಾರ್ಪಣೆ ಮಾಡಲಿದ್ದಾರೆ. ಕಾರ್ಯಕ್ರಮ ನಡೆಯುವ ಭವ್ಯ ವೇದಿಕೆಯ ಮುಂದೆ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಕಲಾತಂಡಗಳು, ಸಾಂಪ್ರದಾಯಿಕ ಉಡುಗೆ ಲಂಬಾಣಿ ಉಡುಗೆಯಲ್ಲಿ ಮಹಿಳೆಯರು ಸಜ್ಜಾಗಿದ್ದಾರೆ. 

ಮಧ್ಯಾಹ್ನ 1 ಗಂಟೆಗೆ ಜಲ್‌ ಜೀವನ್‌ ಮಿಷನ್‌ ಅಡಿಯಲ್ಲಿ ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಹಾಗು ಸರತ್‌ ಚೆನ್ನೈ ಎಕ್ಸ್‌ಪ್ರೆಸ್‌ ವೇ ಪ್ಯಾಕೇಜ್‌ 3ನೇ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ  ಮೋದಿ ಭಾಗವಹಿಸಲಿದ್ದಾರೆ.  

ಅನಂತರ ಅಲ್ಲಿಂದ ಕೊಡೆಕಲ್‌ ಹೆಲಿಪ್ಯಾಡ್‌ಗೆ ರಸ್ತೆ ಮೂಲಕ ಹೊರಡು ಹೆಲಿಪ್ಯಾಡ್‌ ಮೂಲಕ ಕಲಬುರಗಿ ಜಿಲ್ಲೆ ಸೇಡಂ ತಾಲೂಕು ಮಳಖೇಡ ಹೆಲಿಪ್ಯಾಡ್‌ಗೆ ತಲುಪಲಿದ್ದಾರೆ. ಅಲ್ಲಿಂದ ಪ್ರಧಾನ್ ಮೋದಿ ರಸ್ತೆ ಮೂಲಕ ಸಾಗಿ ನೂತನವಾಗಿ ರಚಿಸಲಾಗಿರುವ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಹಾಗೂ ವಿವಿಧ ಕಾರ್ಯಕ್ರಮಗಳ ಶಿಲನ್ಯಾಸ ಮಾಡಲಿದ್ದಾರೆ.

Ads on article

Advertise in articles 1

advertising articles 2

Advertise under the article