ಬಿಜೆಪಿ ಚುನಾವಣಾ ಟಿಕೆಟ್ ಕೈತಪ್ಪಿದರೂ ಬಂಡಾಯ ಏಳದಂತೆ ಕೋಲಾರಮ್ಮನ ಮೇಲೆ ಆಣೆ ಮಾಡಿಸಿದ ಸಚಿವ ಮುನಿರತ್ನ!
Saturday, January 28, 2023
ಕೋಲಾರ(Headlines Kannada): ಬಂಗಾರಪೇಟೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚುಯುತ್ತಿರುವುದರಿಂದ ಒಂದು ವೇಳೆ ಟಿಕೆಟ್ ಕೈತಪ್ಪಿದರೆ ಬಂಡಾಯ ಏಳದಂತೆ ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕರ್ತರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಆಣೆ ಪ್ರಮಾಣ ಮಾಡಿಸಿದ್ದಾರೆ.
ಟಿಕೆಟ್ ಕೈ ತಪ್ಪಿದ್ರು BJP ಪಕ್ಷ ಬಿಟ್ಟೋಗಲ್ಲ ಎಂದು ಈ ವೇಳೆ ಕೋಲಾರಮ್ಮನ ಮೇಲೆ ಆಣೆ ಪ್ರಮಾಣ ಮಾಡಿಸಲಾಗಿದೆ. ಕೋಲಾರ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಶುಕ್ರವಾರ ಆಣೆ ಪ್ರಮಾಣ ನಡೆದಿದೆ.
ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪೈಪೋಟಿ ಹೆಚ್ಚಿದೆ. ಮಾಜಿ ಶಾಸಕರಾದ ಎಂ ನಾರಾಯಣಸ್ವಾಮಿ, ವೆಂಕಟಮುನಿಯಪ್ಪ, ಹಾಗು ಬಿ.ವಿ ಮಹೇಶ್, ವಿ ಶೇಷು, ಅಮರೇಶ್ ಸೇರಿದಂತೆ ಆರು ಮಂದಿ ಬಂಗಾರಪೇಟೆ ಕ್ಷೇತ್ರದಲ್ಲಿ BJP ಟಿಕೆಟ್ ಗಾಗಿ ಲಾಭಿ ನಡೆಸುತ್ತಿದ್ದಾರೆ.