ಕೇಂದ್ರ ಸರಕಾರ ಮಾಡಿರುವ ನೋಟ್ ಬ್ಯಾನ್ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್
ನವದೆಹಲಿ(Headlines Kannada): ಕೇಂದ್ರ್ರ ಸರಕಾರ ಮಾಡಿರುವ ನೋಟುಗಳ ಬ್ಯಾನ್ ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದ್ದು, ನೋಟು ಬ್ಯಾನ್ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಅದು ವಜಾಗೊಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 2016ರಲ್ಲಿ 500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ನೋಟು ಬ್ಯಾನ್ ಮಾಡಿದ್ದು, ಈ ನಿರ್ಧಾರವನ್ನು ತಪ್ಪು ಎನ್ನಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ನ್ಯಾಯಮೂರ್ತಿ ಎಸ್.ಎ. ನಜೀರ್ ನೇತೃತ್ವದ 5 ಮಂದಿ ನ್ಯಾಯಮೂರ್ತಿಗಳಿರುವ ಸಾಂವಿಧಾನಿಕ ಪೀಠವು ತೀರ್ಪು ಪ್ರಕಟಿಸಿದೆ RBIನ ಕೇಂದ್ರೀಯ ಮಂಡಳಿಯೊಂದಿಗೆ ಸಮಾಲೋಚಿಸಿದ ನಂತರ ಕೇಂದ್ರವು ಕ್ರಮ ತೆಗೆದುಕೊಳ್ಳಬೇಕಾಗಿತ್ತು. ಈ ಸಂಬಂಧ 6 ತಿಂಗಳ ಕಾಲ ಇಬ್ಬರ ನಡುವೆ ಸಮಾಲೋಚನೆ ನಡೆದಿದೆ ಎಂದು ಐವರು ಸದಸ್ಯರ ಪೀಠದಲ್ಲಿ ನಾಲ್ವರು ನ್ಯಾಯಾಧೀಶರು ತಿಳಿಸಿದ್ದಾರೆ. ಇದೇ ವೇಳೆ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಭಿನ್ನಾಭಿಪ್ರಾಯದ ತೀರ್ಪು ನೀಡಿ, ನೋಟು ರದ್ದತಿಯನ್ನು ಸಂಸತ್ತಿನ ಕಾಯಿದೆಯ ಮೂಲಕ ಕಾರ್ಯಗತಗೊಳಿಸಬಹುದಿತ್ತು, ಇದು ಸರ್ಕಾರದಿಂದ ಅಲ್ಲ ಎಂದು ಹೇಳಿದರು.