ಉಡುಪಿ: ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಪುರುಷರ ವಾಲಿಬಾಲ್ ಟೂರ್ನ್ ಮೆಂಟ್ ಗೆ ಅದಮಾರು ಶ್ರೀ ಚಾಲನೆ

ಉಡುಪಿ: ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಪುರುಷರ ವಾಲಿಬಾಲ್ ಟೂರ್ನ್ ಮೆಂಟ್ ಗೆ ಅದಮಾರು ಶ್ರೀ ಚಾಲನೆ

ಉಡುಪಿ(Headlines Kannada): ಮಂಗಳೂರು ವಿಶ್ವವಿದ್ಯಾಲಯ ಮತ್ತು ಪೂರ್ಣಪ್ರಜ್ಞ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಉಡುಪಿ ಇದರ ಜಂಟಿ ಆಶ್ರಯದಲ್ಲಿ ಉಡುಪಿ ಪಿಪಿಸಿ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ಐದು ದಿನಗಳ 2022-23ನೇ ಸಾಲಿನ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಪುರುಷರ ವಾಲಿಬಾಲ್ ಟೂರ್ನ್ ಮೆಂಟ್ ಅನ್ನು ವಾಲಿಬಾಲ್ ಸರ್ವ್ ಮಾಡುವ ಮೂಲಕ ಅದಮಾರು ಮಠದ ಈಶಪ್ರಿಯ ಸ್ವಾಮೀಜಿ ಸಾಂಕೇತಿಕವಾಗಿ ಉದ್ಘಾಟಿಸಿದರು. 


ಉದ್ಘಾಟನಾ ಪಂದ್ಯಾಟವನ್ನು ಪೂರ್ಣವಾಗಿ ಕುಳಿತು ನೋಡಿ, ಸ್ಪರ್ಧಾಳುಗಳನ್ನು ಹರಸಿದರು. ಈ ಸಂದರ್ಭದಲ್ಲಿ ಪೂರ್ಣಪ್ರಜ್ಞ ಕಾಲೇಜಿನ ಗೌರವ ಕಾರ್ಯದರ್ಶಿ ಡಾ. ಜಿ.ಎಸ್. ಚಂದ್ರಶೇಖರ್, ಸಂಸ್ಥೆಯ ಪ್ರಾಂಶುಪಾಲ ಡಾ. ರಾಘವೇಂದ್ರ ಎ, ಕ್ರೀಡಾಕೂಟದ ಸಂಯೋಜಕ ಸುಕುಮಾರ್ ಉಪಸ್ಥಿತರಿದ್ದರು

Ads on article

Advertise in articles 1

advertising articles 2

Advertise under the article