ತನ್ನನ್ನು ಸೋಲಿಸಿ ಎಂದ ಡಿಕೆಶಿ, ಸಿದ್ದರಾಮಯ್ಯನವರಿಗೆ ಪ್ರಮೋದ್ ಮಧ್ವರಾಜ್ ಕೊಟ್ಟ ತಿರುಗೇಟು ಏನು...?
ಉಡುಪಿ(Headlines Kannada):ಉಡುಪಿಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ತನ್ನನ್ನು ಟೀಕಿಸಿದ್ದ ಡಿಕೆಶಿ, ಸಿದ್ದರಾಮಯ್ಯನವರಿಗೆ ಪ್ರಮೋದ್ ಮಧ್ವರಾಜ್ ತಿರುಗೇಟು ನೀಡಿದ್ದಾರೆ.
ಉಡುಪಿಯ ತಮ್ಮ ನಿವಾಸದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಈವರೆಗೆ ಏಳು ಬಾರಿ ಪಕ್ಷವನ್ನು ಬದಲಿಸಿದ್ದಾರೆ. ನಾನು ಹುಟ್ಟಿನಿಂದ ಕಾಂಗ್ರೆಸ್. ಈಗ ಬಿಜೆಪಿ ಸೇರಿದ್ದೇನೆ. ಸಿದ್ದರಾಮಯ್ಯ 1978 ರಲ್ಲಿ ರೈತಸಂಘದಲ್ಲಿದ್ದರು.
1983 ರಲ್ಲಿ ಭಾರತೀಯ ಲೋಕದಳ, ಸಮಾಜಪಕ್ಷ ಜನತಾದಳ, ಜಾತ್ಯಾತೀತ ಜನತಾದಳ, ಅಹಿಂದ ಸೇರಿಕೊಂಡರು. ಸಿದ್ದರಾಮಯ್ಯ ಅಶಿಸ್ತಿನ ವಾತಾವರಣ ಸೃಷ್ಟಿ ಮಾಡಿ ವಜಾವಾಗಿದ್ದರು ಎಂದು ಗುಡುಗಿದರು.
ಸನ್ನಿವೇಶಕ್ಕೆ ಅನುಗುಣವಾಗಿ ದೇಶದಲ್ಲಿ ಪಕ್ಷಾಂತರ ಸಾಮಾನ್ಯ. ಹಾಗಿದ್ದಾರೆ ಬೇರೆ ಪಕ್ಷದಿಂದ ಕಾಂಗ್ರೆಸ್ ಗೆ ಬರಬೇಡಿ ಎಂದು ಸಿದ್ದರಾಮಯ್ಯ ಹಾಗೂ ಡಿಕೆಶಿ ಘೋಷಿಸಲಿ ಎಂದು ಸವಾಲು ಹಾಕಿದರು.
ನನ್ನನ್ನು ಅಸಾಮಿ, ಗಿರಾಗಿ ಅಂತ ಹೇಳಿದ್ದಾರೆ. ನಾನು ಸಿದ್ದರಾಮಯ್ಯ ಕ್ಯಾಬಿನೆಟ್ ನಲ್ಲಿ ಮಂತ್ರಿಯಾಗಿದ್ದೆ, ಜನಸಾಮಾನ್ಯರ ಬಗ್ಗೆ ಸಿದ್ದರಾಮಯ್ಯ ಹೇಗೆ ಮಾತನಾಡಬಹುದು? ಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯ ವಿರುದ್ಧ ಕೆಟ್ಟ ಮಾತನಾಡಲು ಎಲ್ಲರಿಗೂ ಬರುತ್ತದೆ. ಆದರೆ, ತಂದೆ ತಾಯಿ ನನಗೆ ಸಂಸ್ಕಾರ ಸೌಜನ್ಯತೆ ಕಲಿಸಿದ್ದಾರೆ ಎಂದು ಕುಟುಕಿದರು.
ಉಡುಪಿ ಚಿಕ್ಕಮಗಳೂರು, ಉ.ಕನ್ನಡ ಮೈತ್ರಿ ಸೀಟ್ ಆಗಿತ್ತು. ಸಿದ್ದರಾಮಯ್ಯ ಮೈಸೂರು ಕ್ಷೇತ್ರ ಉಳಿಸಲು ಸ್ವಾರ್ಥ ಸಾಧನೆ ಮಾಡಿದರು. ಜೆಡಿಎಸ್ ನಲ್ಲಿ ಟಿಕೆಟ್ ಪಡೆಯೋ ಮೊದಲು ಸಿದ್ದರಾಮಯ್ಯ ದಿನೇಶ್ ಗುಂಡೂರಾವ್ ಪರವಾನಿಗೆ ಪಡೆದಿದ್ದೇನೆ. ಸಿದ್ದರಾಮಯ್ಯ ಅವರ ಸುಳ್ಳಿನ ಬಗ್ಗೆ ಆಕ್ಷೇಪ ಇದೆ. ಅದನ್ನು ಖಂಡಿಸುತ್ತೇನೆ. ಜೆಡಿಎಸ್ ನಿಂದ ಹಣ ಪಡೆದಿದ್ದಾನೆ ಎಂದು ಆರೋಪಿಸಿದ್ದಾರೆ. ಜೆಡಿಎಸ್ ನಿಂದ ಬಂದ ಫಂಡನ್ನು ಜಿಲ್ಲಾ ಕಾಂಗ್ರೆಸ್ ಪಡೆದಿದೆ. ಎಲ್ಲಾ ಹಂಚಿಕೆ ಮಾಡಿದ್ದೇನೆ ಎಂದು ತಿರುಗೇಟು ನೀಡಿದರು.