ಪಿಎಸ್ಐ ಹಗರಣ; ದಿವ್ಯಾ ಹಾಗರಗಿ ಸೇರಿದಂತೆ 26 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು
ಕಲಬುರಗಿ(Headlines Kannada): ರಾಜ್ಯದಲ್ಲಿ ತೀರ್ವ ಸಂಚಲನ ಮೂಡಿಸಿದ್ದ 545 PSI ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಜೈ#ಲುಪಾಲಾಗಿದ್ದ ಕಿಂಗ್ಪಿನ್ ದಿವ್ಯಾ ಹಾಗರಗಿ ಸೇರಿದಂತೆ 26 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ.
ದಿವ್ಯಾ ಹಾಗರಗಿ, ಮಂಜುನಾಥ ಮೇಳಕುಂದಿ, ಡಿವೈಎಸ್ಪಿ ಮಲ್ಲಿಕಾರ್ಜುನ ಸೇರಿದಂತೆ 26 ಜನರಿಗೆ ಕಲಬುರಗಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕೆ.ಬಿ.ಪಾಟೀಲ್ ಜಾಮೀನು ನೀಡಿದ್ದಾರೆ. PSI ನೇಮಕಾತಿ ಹಗರಣದಲ್ಲಿ ಈ ವರೆಗೆ 36 ಜನರಿಗೆ ಜಾಮೀನು ದೊರಕಿದೆ.
8 ಮಂದಿ ಅಭ್ಯರ್ಥಿಗಳು, 5 ಮಂದಿ ಪರೀಕ್ಷಾ ಮೇಲ್ವಿಚಾರಕಿಯರು, ಮೂವರು ಪೊಲೀಸ್ ಇಲಾಖೆ ಅಧಿಕಾರಿಗಳು, ಮಧ್ಯವರ್ತಿಗಳು ಸೇರಿದಂತೆ ಒಟ್ಟು 26 ಜನರಿಗೆ ಜಾಮೀನು ನೀಡಲಾಗಿದೆ.
ಕಳೆದ 2021ರ ಅಕ್ಟೋಬರ್ ತಿಂಗಳಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆದಿತ್ತು. ಈ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿತ್ತು. ಈ ಬಗ್ಗೆ 2022 ರ ಎಪ್ರಿಲ್ 8 ರಂದು ಕಲಬುರಗಿ ಚೌಕ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ಸಿಐಡಿಗೆ ಅಂಗಳಕ್ಕೆ ವರ್ಗಾವಣೆಯಾಗಿ, ಸಿಐಡಿ ಪೊಲೀಸರು ಇಲ್ಲಿವರಗೆ 53 ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದರು.