
ಸ್ಯಾಂಟ್ರೋ ರವಿ ಪ್ರಕರಣ: ಸಿಐಡಿಗೆ ನೀಡಿದ ರಾಜ್ಯ ಸರಕಾರ; ಜನವರಿ 25ರವರೆಗೆ ನ್ಯಾಯಾಂಗ ಬಂಧನ
Monday, January 16, 2023
ಬೆಂಗಳೂರು: ರಾಜ್ಯದಲ್ಲಿ ಬಹಳಷ್ಟು ಕುತೂಹಲಕ್ಕೆ ಕಾರಣವಾದ ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.
ಈ ವಿಷಯವನ್ನು ಸೋಮವಾರ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದು, ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಸ್ಯಾಂಟ್ರೋ ರವಿ ವಿರುದ್ಧದ ದೂರುಗಳ ತನಿಖೆ CIDಯಿಂದ ನಡೆಸಲಾಗುವುದು ಎಂದರು.
ಮೈಸೂರಿನ ವಿಜಯನಗರ ಠಾಣೆಯಲ್ಲಿ ದಾಖಲಾಗಿದ್ದ 3 ಪ್ರಕರಣ, ಕಾಟನ್ ಪೇಟೆ ಠಾಣೆಯಲ್ಲಿ ದಾಖಲಾಗಿದ್ದ ಫೇಕ್ ಕೇಸ್, ರವಿ ಪತ್ನಿ ದಾಖಲಿಸಿದ್ದ ಪ್ರಕರಣ, ವರ್ಗಾವಣೆ ಹಾಗು ವೇ#ಶ್ಯಾವಾ#ಟಿಕೆ ದಂ#ಧೆ ಪ್ರಕರಣಳೂ ಸೇರಿದಂತೆ ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿದ್ದ ಎಲ್ಲ ಪ್ರಕರಣಗಳ ತನಿಖೆಯನ್ನು CIDಗೆ ವಹಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೆಲ ದಿನಗಳ ಹಿಂದೆ ಗುಜರಾತ್‌ನಲ್ಲಿ ಬಂಧಿಸಲಾದ ಸ್ಯಾಂಟ್ರೊ ರವಿ ಮತ್ತು ಇತರ ಆರೋಪಿಗಳನ್ನು ಮತ್ತೆ ಇಂದು ಕೋರ್ಟ್‌ಗೆ ಹಾಜರುಪಡಿಸಲಾಯಿತು. ಜನವರಿ 25ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.