
ಸ್ಯಾಂಟ್ರೋ ರವಿಯೊಂದಿಗೆ ಯಾವುದೇ ಅಧಿಕಾರಿ, ರಾಜಕಾರಣಿ ಶಾಮೀಲಾಗಿದ್ದರೂ ತನಿಖೆಯಿಂದ ಹೊರಗೆಳೆಯುತ್ತೇವೆ: ಗೃಹ ಸಚಿವ ಆರಗ ಜ್ಞಾನೇಂದ್ರ
Friday, January 13, 2023
ಉಡುಪಿ(Headlineskannada): ಕಳೆದ 11 ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸ್ಯಾಂಟ್ರೋ ರವಿಯನ್ನು ಗುಜರಾತ್ ನಲ್ಲಿ ಬಂಧಿಸಲಾಗಿದೆ. ಪೊಲೀಸರ ವಿಶೇಷ ಪ್ರಯತ್ನದಿಂದ ಸ್ಯಾಂಟ್ರೊ ರವಿಯ ಬಂಧನವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಉಡುಪಿ ಎಸ್ಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಕಾನೂನು ಪ್ರಕ್ರಿಯೆ ಮುಗಿಸಿಕೊಂಡು ಆತನನ್ನು ಬೆಂಗಳೂರಿಗೆ ಕರೆ ತರಲಾಗುತ್ತದೆ. ಸರಕಾರದ ಮೇಲೆ ಎಲ್ಲಾ ರೀತಿಯ ಟೀಕೆಗಳು ಇತ್ತು. ಸರಕಾರ ಮೀನ ಮೇಷ ಎಣಿಸುತ್ತಿದೆ ಹಾಗೂ ಒತ್ತಡ ಇದೆ ಎನ್ನುತ್ತಿದ್ದರು. ಆದರೆ ಸರಕಾರದ ಮೇಲೆ ಯಾವ ಒತ್ತಡವು ಇರಲಿಲ್ಲ. ನಾವು ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೆವು. ಎಲ್ಲೇ ಇದ್ದರೂ ಹೇಗೆ ಇದ್ದರೂ ಕರೆತಂದು ವಿಚಾರಿಸಬೇಕೆಂದು ಹೇಳಿದ್ದೆವು ಎಂದರು.
ಆರೋಪಿ ರವಿಯೊಂದಿಗೆ ಯಾವುದೇ ಅಧಿಕಾರಿ, ರಾಜಕಾರಣಿ ಇದ್ದರೂ ಕೂಡ ತನಿಖೆಯಿಂದ ಹೊರಗೆಳೆಯುತ್ತೇವೆ. ಆತನ ಜೊತೆಗೆ ಇರುವವರನ್ನು ಕೂಡ ಬಂಧಿಸಲಾಗುವುದು ಎಂದು ಹೇಳಿದರು.