ಕನ್ನಡದ ಖ್ಯಾತ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ನಿ#ಧನ

ಕನ್ನಡದ ಖ್ಯಾತ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ನಿ#ಧನ


ಮಂಗಳೂರು(Headlineskannada): ಖ್ಯಾತ ಹಿರಿಯ ಸಾಹಿತಿ, ಕಾಂದಬರಿಗಾರ್ತಿ ಸಾರಾ ಅಬೂಬಕ್ಕರ್ ಮಂಗಳವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿ#ಧನರಾಗಿದ್ದಾರೆ. 86 ವರ್ಷ ವಯಸ್ಸಿನ ಸಾರಾ ಅಬೂಬಕ್ಕರ್ ಮಂಗಳವಾರ  ಮಧ್ಯಾಹ್ನ 1 ಗಂಟೆ ಸುಮಾರಿಗೆ ನಿ#ಧನರಾಗಿದ್ದಾರೆ.

ಕನ್ನಡದ ಖ್ಯಾತ ಸಾಹಿತಿಗಳಲ್ಲಿ ಒಬ್ಬರಾಗಿದ್ದ ಸಾರಾ ಅಬೂಬಕ್ಕರ್, ಹುಟ್ಟಿದ್ದು ಜೂನ್ 30, 1936 ರಂದು ಕಾಸರಗೋಡಿನ ಚಂದ್ರಗಿರಿಯಲ್ಲಿ. ಮಹಿಳಾ ಸಮಾನತೆ, ಮಹಿಳಾ ಸಬಲೀಕರಣದ ಚಿಂತನೆ ಹೊಂದಿದ್ದ ಅವರ, ಮೊದಲ ಕಾದಂಬರಿ ಚಂದ್ರಗಿರಿಯ ತೀರದಲ್ಲಿ ಜನಪ್ರಿಯವಾಗಿ ಗಮನ ಸೆಳೆದಿದೆ. ಸಣ್ಣ ಗ್ರಾಮವೊಂದರಲ್ಲಿ ಹುಟ್ಟಿ ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾರಾ, 10 ಕ್ಕೂ ಹೆಚ್ಚು ಕಾದಂಬರಿ, 6 ಕಥಾ ಸಂಕಲನ, 5 ಬಾನುಲಿ ನಾಟಕ, 4 ಲೇಖನ, 1 ಪ್ರವಾಸ ಕಥನ ಬರೆದಿದ್ದಾರೆ. ಜೊತೆಗೆ ಇವರಿಗೆ ಸಾಹಿತ್ಯ ಕ್ಷೇತ್ರದಲ್ಲಿ 11 ಕ್ಕೂ ಹೆಚ್ಚು ಪ್ರಶಸ್ತಿಗಳು ಬಂದಿದೆ. 

ಸಾರಾ ಅಬೂಬಕ್ಕರ್ ಅವರಿಗೆ ಬಂದ ಪ್ರಶಸ್ತಿಗಳು...

ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ

ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ

ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ

‘ಸಹನಾ’ಕಾದಂಬರಿಗೆ ವರ್ಧಮಾನ ಪ್ರಶಸ್ತಿ

‘ಸುಳಿಯಲ್ಲಿ ಸಿಕ್ಕವರು’ ಕೃತಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ ಮತ್ತು ಸಂದೇಶ ಪ್ರಶಸ್ತಿ

ಅನುಪಮ ಪ್ರಶಸ್ತಿ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ

ಮಾಸ್ತಿ ಪ್ರಶಸ್ತಿ

ನೃಪತುಂಗ ಪ್ರಶಸ್ತಿ

ಮಂಗಳೂರಿನ ಹ್ಯಾಟ್ ಹಿಲ್ ಬಳಿ ನೆಲೆಸಿದ್ದ ಸಾರಾ ಅಬೂಬಕ್ಕರ್'ಗೆ  ನಾಲ್ವರು ಪುತ್ರರು ಅಪಾರ ಬಂಧುಗಳನ್ನು ಅಗಲಿದ್ದಾರೆ. ಮಂಗಳೂರಿನ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಇಂದು ರಾತ್ರಿ 8 ಗಂಟೆಗೆ ಅಂ#ತಿಮ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.


Ads on article

Advertise in articles 1

advertising articles 2

Advertise under the article