.jpg)
ಶ್ರೀ ಸಿದ್ಧೇಶ್ವರ ಶ್ರೀಗಳ ನಿ#ಧನಕ್ಕೆ ಮೋದಿ, ಬೊಮ್ಮಾಯಿ, ಸಿದ್ದರಾಮಯ್ಯ ಸೇರಿದಂತೆ ಕಂಬನಿ ಮಿಡಿದ ಗಣ್ಯರು; ಹೇಳಿದ್ದೇನು...?
ಬೆಂಗಳೂರು(Headlines Kannada): ಸೋಮವಾರ ನಿ#ಧನರಾಗಿರುವ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅಗಲಿಕೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದ್ದಾರೆ.
ಸೋಷಿಯಲ್ ಮೀಡಿಯಾ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಶ್ರೀಗಳ ಫೋಟೋ ಹಂಚಿಕೊಂಡು ಭಾವುಕರಾಗಿರುವ ಪ್ರಧಾನಿ ಮೋದಿಯವರು, , ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು ಸಮಾಜಕ್ಕೆ ನೀಡಿರುವ ಅನನ್ಯ ಸೇವೆಗಾಗಿ ಅವರನ್ನು ಸ್ಮರಿಸಲಾಗುತ್ತದೆ. ಅವರು ಇತರರ ಒಳಿತಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದರು ಹಾಗು ಅವರ ಜ್ಞಾನೋತ್ಸಾಹಕ್ಕಾಗಿ ಅವರು ಗೌರವಗಳಿಸಿದ್ದರು. ಇಂತಹ ದುಃಖದ ಸಮಯದಲ್ಲಿ ಅವರ ಅಸಂಖ್ಯಾತ ಭಕ್ತರೊಂದಿಗೆ ನನ್ನ ಸಂವೇದನೆ ಇದೆ. ಓಂ. ಶಾಂತಿ ಎಂದು ಸಂತಾಪ ಸೂಚಿಸದ್ದಾರೆ.
ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿಯವರು ಟ್ವೀಟ್ ಮಾಡಿ, ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು ಎಂದು ಸಂತಾಪ ಸೂಚಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಜ್ಞಾನಯೋಗಾಶ್ರಮದ ಪೀಠಾಧೀಶರಾದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ಅತೀವ ನೋವುಂಟುಮಾಡಿದೆ.
ಧಾರ್ಮಿಕ ಪ್ರವಚನದ ಮೂಲಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿದ್ದ ದಾರ್ಶನಿಕ ಗುರುವಿನ ಅಗಲಿಕೆ ವೈಯಕ್ತಿಕವಾಗಿ ಮತ್ತು ನಾಡಿಗೆ ತುಂಬಿಬಾರದ ನಷ್ಟ ಎಂದಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್ ನಿರಾಣಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರು, ಮಾಜಿ ಸಚಿವರು ಶಾಸಕರು ಹಾಗೂ ಕಾಂಗ್ರೆಸ್ನ ಹಿರಿಯ ನಾಯಕರು ಶ್ರೀಗಳ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.