ಶಿಕ್ಷೆಯ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿರುವ ನಟಿ‌ ಅಭಿನಯ; ಲುಕ್‌ಔಟ್‌ ನೋಟಿಸ್‌ ಜಾರಿ

ಶಿಕ್ಷೆಯ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿರುವ ನಟಿ‌ ಅಭಿನಯ; ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು(Headlines Kannada): ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಜೈಲು ಶಿಕ್ಷೆಗೆ ಒಳಗಾಗಿದ್ದ ನಟಿ‌ ಅಭಿನಯ ಇನ್ನೂ ಪೋಲೀಸರ ಕೈಗೆ ಸಿಗದ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಲಾಗಿದೆ. 

ಕೆಲವು ತಿಂಗಳ ಹಿಂದೆ ವರದಕ್ಷಿಣೆ ಕಿ#ರುಕುಳ ಹಿನ್ನೆಲೆ ಕೋರ್ಟ್ ಮೆಟ್ಟಿಲೇರಿದ್ದ ಅಭಿನಯ ಅತ್ತಿಗೆ ವರಲಕ್ಷ್ಮಿ ಅವರ ಪ್ರಕರಣವನ್ನು ವಿಚಾರಣೆ ಮಾಡಿದ ನ್ಯಾಯಾಲಯ ನಟಿ‌ ಅಭಿನಯ ಕುಟುಂಬಕ್ಕೆ‌ ಜೈಲು ಶಿ#ಕ್ಷೆಯನ್ನು ನೀಡಿ ಆದೇಶ ಹೊರಡಿಸಿತ್ತು. ಆದರೆ ನಟಿ ಅಭಿನಯ ಪೊಲೀಸರ ಕೈಗೆ ಸಿಗದೇ ತಲೆಮರೆಸಿಕೊಂಡಿದ್ದರು. ಈಗ ಅವರ ಮೇಲೆ  ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಲಾಗಿದೆ. 

ನಟಿ ಅಭಿನಯ ಹಾಗು ಅವರ ಕುಟುಂಬದವರ ಮೇಲೆ ಸೆಕ್ಷನ್ಸ್ ಕೋರ್ಟ್ ವಿಚಾರಣೆಯ ವೇಳೆ ನ್ಯಾಯಾಲಯವು ಶಿಕ್ಷೆ ವಿಧಿಸಿತ್ತು. ಈ ವೇಳೆ ತಲೆಮರೆಸಿಕೊಂಡು ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ನಟಿ ಅಭಿನಯ, ಸೋದರ ಹಾಗೂ ತಾಯಿ ಹೈಕೋರ್ಟ್ ಗೆ ಹೋಗಿದ್ದರು. ಹೈಕೋರ್ಟ್‌ನಲ್ಲಿ ನ್ಯಾಯಾಧೀಶರು ಸೆಷನ್ಸ್ ನ್ಯಾಯಾಲಯದ ಆದೇಶವನ್ನೇ ಎತ್ತಿ ಹಿಡಿದಿದ್ದರು. 

Ads on article

Advertise in articles 1

advertising articles 2

Advertise under the article