ಅಡ್ಯಾರ್ ಪದವು ಪರಿಸರದ ವಿವಿಧ ಮನೆಗಳಿಗೆ ಭೇಟಿ ನೀಡಿ ಗ್ರಾಮಸ್ಥರ ಕುಂದು ಕೊರತೆಗಳನ್ನು ಆಲಿಸಿದ ಇನಾಯತ್ ಅಲಿ
Sunday, February 26, 2023
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯಾರ್ ಪದವು ಪರಿಸರದ ವಿವಿಧ ಮನೆಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ನಿನ್ನೆ ಭೇಟಿ ನೀಡಿ ಗ್ರಾಮಸ್ಥರ ಕುಂದು ಕೊರತೆಗಳನ್ನು ಆಲಿಸಿ ಪರಿಹಾರ ಒದಗಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಕೆ.ದಾಮೋದರ್ ಶೆಟ್ಟಿ, ರೊನಾಲ್ಡ್ ಫಾಸ್ಕಲ್ ಸಲ್ಡಾನ, ಅಶ್ರಫ್ ಅಡ್ಯಾರ್ ಹಾಗೂ ಗುರುಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಮುಫೀದ್ ರವರು ಸೇರಿದಂತೆ ಇನ್ನಿತರರು ಇದ್ದರು.