ಸಿಡಿ ಪ್ರಕರಣ; ಸಿಬಿಐಗೆ ವಹಿಸುವ ಕುರಿತು ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ತೀರ್ಮಾನ
Thursday, February 2, 2023
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದ ಸಿಬಿಐಗೆ ವಹಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಅವರು ಈ ಬಗ್ಗೆ ನನಗೆ ಮಾಹಿತಿ ನೀಡಿದ್ದಾರೆ. ಪ್ರಕರಣವನ್ನು ಸಿಬಿಐಗೆ ಕೊಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಜೊತೆ ಚರ್ಚಿಸಿ ತೀರ್ಮಾನ ಮಾಡಬೇಕಾಗುತ್ತದೆ ಎಂದು ಹೇಳಿದರು.
ಸಿಡಿ ಮೂಲಕ ಯಾರು ಯಾರನ್ನಾದರೂ ತೇಜೋವದೆ ಮಾಡೋದು ತಪ್ಪು. ಆ ರೀತಿಯ ಏನಾದರೂ ಇದ್ದರೆ ಅಂತಹವ ವಿರುದ್ಧ ಕಾನೂನಿನ ರೀತಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.