ಕೆಂಗಲ್ ಹನುಮಂತಯ್ಯನವರ 115 ನೇ ಜನ್ಮದಿನಾಚಾರಣೆ; ಪ್ರತಿಮೆಗೆ ಗೌರವ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ
Friday, February 10, 2023
ಬೆಂಗಳೂರು: ಇಂದು ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯನವರ 115 ನೇ ಜನ್ಮದಿನಾಚಾರಣೆಯ ಅಂಗವಾಗಿ ವಿಧಾನಸೌಧದಲ್ಲಿ ಅವರ ಪ್ರತಿಮೆ, ಭಾವಚಿತ್ರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿ, ಗೌರವ ಅರ್ಪಿಸಿದರು.
ಬಳಿಕ ಮಾತನಾಡಿ, ಬೆಂಗಳೂರು - ಮೈಸೂರು ರಸ್ತೆಯ ರಾಮನಗರದಲ್ಲಿ ಮಾಜಿ ಸಿಎಂ ದಿವಂಗತ ಕೆಂಗಲ್ ಹನುಮಂತಯ್ಯ ಅವರ ಮೂರ್ತಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೆಂಗಲ್ ಹನುಮಂತಯ್ಯ ಅವರು ಕರ್ನಾಟಕ ಏಕೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ವಿಧಾನಸೌಧದ ಕಟ್ಟಡ ಸುಂದರವಾಗಿ ತಲೆ ಎತ್ತಿದ್ದರೆ ಅದಕ್ಕೆ ಮುಖ್ಯ ಕಾರಣ ಕೆಂಗಲ್ ಹನುಮಂತಯ್ಯ ಎಂದು ನೆನಪಿಸಿಕೊಂಡರು.