ಬಿಜೆಪಿ ಬಗ್ಗೆ ಮಾತನಾಡುವ ಮೊದಲು ರಾಜ್ಯದಲ್ಲಿ ಕಾಂಗ್ರೆಸ್ಸಿನ ಒಳಜಗಳವನ್ನು ಮೊದಲು ಸರಿಪಡಿಸಲಿ: ಸುರ್ಜೇವಾಲ ವಿರುದ್ಧ ಗುಡುಗಿದ ಸಿಎಂ ಬೊಮ್ಮಾಯಿ
ಹುಬ್ಬಳ್ಳಿ(Headlines Kannada): ಬಿಜೆಪಿ ಬಗ್ಗೆ ಮಾತನಾಡುವ ಕಾಂಗ್ರೆಸ್ಸಿನ ರಣದೀಪ್ ಸುರ್ಜೇವಾಲ ಅವರು ರಾಜ್ಯದಲ್ಲಿ ಕಾಂಗ್ರೆಸ್ಸಿನ ಒಳಜಗಳವನ್ನು ಮೊದಲು ಸರಿಪಡಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರವಿವಾರ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಮಾತನಾಡಿರುವ ರಣದೀಪ್ ಸುರ್ಜೇವಾಲ ವಿರುದ್ಧ ವಾಗ್ದಾಳಿ ನಡೆಸಿದರು.
ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ನರಕ ಸೃಷ್ಟಿಯಾಗಿದೆ ಎಂದು ಸುರ್ಜೇವಾಲಾ ಹೇಳಿದ್ದು, ಕಾಂಗ್ರೆಸ್ ಸೃಷ್ಟಿಸಿದ್ದ ನರಕದಿಂದಲೇ ಜನ ಅವರನ್ನು ಮನೆಗೆ ಕಳುಹಿಸಿದ್ದಾರೆ ಎಂಬುದನ್ನು ಅರಿತುಕೊಳ್ಳಲಿ. ರಾಜ್ಯ್ ಕಾಂಗ್ರೆಸಿನಲ್ಲಿ ಏನಾಗುತ್ತಿದೆ ಎಂಬುದನ್ನು ಅವರು ತಿಳಿದುಕೊಳಲಿ ಎಂದರು.
ವಿಪಕ್ಷದವರು ಕಿವಿ ಮೇಲೆ ಹೂವಿಟ್ಟುಕೊಳ್ಳುವ ಅಭಿಯಾನ ಆರಂಭಿಸಿರುವ ಬಗ್ಗೆ ಮಾತನಾಡಿದ ಬೊಮ್ಮಾಯಿ, ಕಾಂಗ್ರೆಸಿಗರು ಇಷ್ಟು ದಿನ ಜನರಿಗೆ ಅವರು ಕಿವಿ ಮೇಲೆ ಹೂವಿಟ್ಟಿದ್ದು, ಇನ್ನು ಮುಂದೆ ಜನ ನಿಮಗೆ ಶಾಶ್ವತವಾಗಿ ಕಿವಿ ಮೇಲೆ ಹೂವಿಡುತ್ತಾರೆ ಎಂಬುದನ್ನು ಮತ್ತೊಮ್ಮೆ ಹೇಳಿದರು.