ಈ ಬಾರಿಯ ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಹೇಳಿದ್ದೇನು..?
Wednesday, February 1, 2023
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಮಂಡಿಸಿದ 2023ರ ಕೇಂದ್ರ ಬಜೆಟ್ ನಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಣದುಬ್ಬರ ಮತ್ತು ನಿರುದ್ಯೋಗಕ್ಕೆ ಪರಿಹಾರ ಸೂಚಿಸಿಲ್ಲ ಎಂದು ಕಾಂಗ್ರೆಸ್ ಟೀಕಿಸಿದೆ.
ಬಜೆಟ್ ನಂತರ ಸಂಸತ್ ಹೊರಗಡೆ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕಸಭೆಯಲ್ಲಿ ಕಾಂಗ್ರೆಸ್ ಉಪ ನಾಯಕ ಗೌರವ್ ಗೊಗೊಯ್, ಈ ಬಾರಿಯ ಬಜೆಟಿನಿಂದ ದೊಡ್ಡ ಉದ್ಯಮಿಗಳಿಗೆ ಮಾತ್ರ ಲಾಭವಾಗಲಿದೆ ಎಂದರು.
ಹಣದುಬ್ಬರ ಮತ್ತು ಬೆಲೆ ಏರಿಕೆಯನ್ನು ಪರಿಗಣಿಸಿ ರೂ 7 ಲಕ್ಷದವರೆಗಿನ ತೆರಿಗೆ ವಿನಾಯಿತಿ ಅತ್ಯಲ್ಪವಾಗಿದೆ, ಇದು ಮಧ್ಯಮ ವರ್ಗದವರಿಗೆ ಸಾಕಾಗುವುದಿಲ್ಲ ಎಂದು ಅವರು ಹೇಳಿದರು.
ಕೇಂದ್ರ ಬಜೆಟ್ ನಲ್ಲಿ ಕೆಲವು ವಿಷಯಗಳಿಗೆ ಅಂದರೆ ಬಡ ಗ್ರಾಮೀಣ ಕಾರ್ಮಿಕರು, ಉದ್ಯೋಗ ಮತ್ತು ಹಣದುಬ್ಬರದ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಕೆಲವು ಮೂಲಭೂತ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ ಎಂದು ಸಂಸದ ಶಶಿ ತರೂರ್ ಪ್ರತಿಕ್ರಿಯಿಸಿದ್ದಾರೆ.