
ಮಂಗಳೂರು ಮುಸ್ಲಿಂ ಸೆಂಟ್ರಲ್ ಕಮಿಟಿಯ ಸಂಘಟನಾ ಕಾರ್ಯದರ್ಶಿಯಾಗಿ ಇಕ್ಬಾಲ್ ಅಹ್ಮದ್ ಮುಲ್ಕಿ ನೇಮಕ
Sunday, February 5, 2023
ಮಂಗಳೂರು(Headlines Kannada): ರಾಜ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾದ ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ಮಂಗಳೂರು (ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ) ಇದರ ಸಂಘಟನಾ ಕಾರ್ಯದರ್ಶಿಯಾಗಿ ಇಕ್ಬಾಲ್ ಅಹ್ಮದ್ ಮುಲ್ಕಿ ಯವರನ್ನು ಆಯ್ಕೆಗೊಳಿಸಿ ಸಂಸ್ಥೆಯ ಅಧ್ಯಕ್ಷರಾದ ಕೆ. ಎಸ್. ಮೊಹಮ್ಮದ್ ಮಸೂದ್ ಆದೇಶವನ್ನು ಹೊರಡಿಸಿದ್ದಾರೆ.
ಮುಲ್ಕಿ ಶಾಫಿ ಜುಮ್ಮಾ ಮಸೀದಿಯ ನಿಕಟಪೂರ್ವ ಅಧ್ಯಕ್ಷರಾಗಿ, ಎಸ್ ವೈ ಎಸ್ ಮುಲ್ಕಿ ರೇಂಜ್ ಅಧ್ಯಕ್ಷರಾಗಿ, ಸಂವಿಧಾನ ಸಂರಕ್ಷಣಾ ವೇದಿಕೆ ಮುಲ್ಕಿ ತಾಲೂಕು ಅಧ್ಯಕ್ಷರಾಗಿ, ಎಸ್ಕೆಎಸ್ಎಸ್ಎಫ್, ಎಂಜೆಎಫ್ ಹೀಗೇ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಹಾಗೂ ಹಿರಿತನವನ್ನು ಗಮನಿಸಿ ಪ್ರತಿಷ್ಠಿತ ಸಂಸ್ಥೆಯ ಜವಾಬ್ದಾರಿಯುತ ಸ್ಥಾನಕ್ಕೆ ಆಯ್ಕೆಗೊಳಿಸಿ ಆದೇಶ ಹೊರಡಿಸಿದ್ದಾರೆ.