ಕಾಂಗ್ರೆಸ್ ಹಿರಿಯ ನಾಯಕ ಪವನ್ ಖೇರಾರನ್ನು ಇಂಡಿಗೊ ವಿಮಾನದಿಂದ ಇಳಿಸಿ ಬಂಧಿಸಿದ ಪೊಲೀಸರು; ಕಾಂಗ್ರೆಸ್ ಕಿಡಿ
Thursday, February 23, 2023
ಹೊಸದಿಲ್ಲಿ: ಕಾಂಗ್ರೆಸ್ ಹಿರಿಯ ನಾಯಕ ಪವನ್ ಖೇರಾ ಅವರನ್ನು ದಿಲ್ಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೊ ವಿಮಾನದಿಂದ ಇಳಿಸಿ ಬಂಧಿಸಿರುವ ಘಟನೆ ಗುರುವಾರ ನಡೆದಿದೆ.
ದೆಹಲಿಯಿಂದ ಇಂಡಿಗೊ ಫ್ಲೈಟ್ 6 ಇ -204 ರಿಂದ ರಾಯಪುರಕ್ಕೆ ಹೋಗುತ್ತಿದ್ದ ವೇಳೆ ಈ ನಾಟಕೀಯ ಬೆಳವಣಿಗೆ ನಡೆದಿದೆ. ನಾವೆಲ್ಲರೂ ವಿಮಾನದಲ್ಲಿ ಕುಳಿತಿದ್ದ ಸಮಯದಲ್ಲಿ ನಮ್ಮ ಜೊತೆಯಿದ್ದ ಪವನ್ ಖೇರಾ ಅವರಲ್ಲಿ ವಿಮಾನದಿಂದ ಇಳಿಯಲು ಕೇಳಲಾಯಿತು, ಇದು ಸರ್ವಾಧಿಕಾರಿ ವರ್ತನೆ, ಸರ್ವಾಧಿಕಾರಿಯು ಅಧಿವೇಶನಕ್ಕೆ ಮುಂಚಿತವಾಗಿ ಇಡಿ ದಾಳಿಗಳನ್ನು ಮಾಡಿದ್ದಾರೆ, ಈಗ ಅಂತಹ ಕಾರ್ಯಕ್ಕೆ ಇಳಿದಿದ್ದಾರೆ ಎಂದು ಕಾಂಗ್ರೆಸ್ ನಾಯಕ್ರು ಆಕ್ರೋಶ ಹೊರಹಾಕಿದ್ದಾರೆ.
ಪವನ್ ಖೇರಾ ಅವರನ್ನು ವಿಮಾನದಿಂದ ಕೆಳಕ್ಕಿಳಿಸಿ ಪೊಲೀಸರು ಬಂಧಿಸಿದ್ದಾರೆ. ಇದರಿಂದ ಸುಮಾರು 50 ಕಾಂಗ್ರೆಸ್ ನಾಯಕರು ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುವ ಮೂಲಕ, ವಿಮಾನ ಹಾರಾಟಕ್ಕೆ ಅವಕಾಶ ನೀಡಲು ನಿರಾಕರಿಸಿದ್ದು, ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.