ಹೊತ್ತಿ ಉ#ರಿದ ಕಾರು; ಗರ್ಭಿಣಿ ಸೇರಿದಂತೆ ಇಬ್ಬರು ಸ#ಜೀವ ದ#ಹನ: ನಾಲ್ವರು ಪ್ರಾಣಾಪಾಯದಿಂದ ಪಾರು
ಕಣ್ಣೂರು: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂ#ಕಿ ಕಾಣಿಸಿಕೊಂಡ ಪರಿಣಾಮ ಗರ್ಭಿಣಿ ಸೇರಿದಂತೆ ಇಬ್ಬರು ಸ#ಜೀವ ದ#ಹನವಾಗಿರುವ ಹೃದಯ ವಿದ್ರಾವಕ ಘಟನೆ ಕೇರಳದ ಕಣ್ಣೂರಿನಲ್ಲಿ ಇಂದು ನಡೆದಿದೆ.
ಗುರುವಾರ ಮುಂಜಾನೆ 10.30ರ ಸುಮಾರಿಗೆ ಕಣ್ಣೂರು ಜಿಲ್ಲಾಸ್ಪತ್ರೆಯ ಮುಂಭಾಗವೇ ಈ ದುರಂತ ನಡೆದಿದೆ. ಕಾರಿನಲ್ಲಿ ಸಿಲುಕಿ ಸ#ಜೀವ ದ#ಹನಗೊಂಡವರನ್ನು ಪ್ರಜೀತ್ ಹಾಗೂ ಆತನ ಪತ್ನಿ ರೀಷಾ ಎಂದು ಗುರುತಿಸಲಾಗಿದೆ.
ಕಾರಿನಲ್ಲಿ 6 ಮಂದಿ ಪ್ರಯಾಣಿಸುತ್ತಿದ್ದರು ಮತ್ತು ವಾಹನಕ್ಕೆ ಬೆಂ#ಕಿ ಹೊತ್ತಿಕೊಂಡಾಗ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಗು ಸೇರಿದಂತೆ ನಾಲ್ವರು ಪಾರಾಗಿದ್ದು, ಸಂತ್ರಸ್ತರ ಸಹ ಪ್ರಯಾಣಿಕರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತ ನಡೆದ ಸ್ಥಳಕ್ಕೆ ಕಣ್ಣೂರು ನಗರ ಪೊಲೀಸ್ ಕಮಿಷನರ್ ಅಜಿತ್ ಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆಂ#ಕಿ ಹೊತ್ತಿಕೊಂಡ ಕಾರಿನ ಮುಂಭಾಗದ ಬಾಗಿಲು ತೆರೆಯಲು ಸಾಧ್ಯವಾಗದ ಕಾರಣ ಇಬ್ಬರು ಸಾ#ವನ್ನಪ್ಪಿದ್ದಾರೆ ಎಂದವರು ಹೇಳಿದರು.
ಜಿಲ್ಲೆಯ ಕುಟ್ಯತ್ತೂರಿನವರಾದ ಸಂತ್ರಸ್ತರು ಮತ್ತು ಇತರರು ಇಂದು ತಪಾಸಣೆಗಾಗಿ ಜಿಲ್ಲಾ ಆಸ್ಪತ್ರೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.