ನಿಗಮ ಮಂಡಳಿಗೆ ರಾಜೀನಾಮೆ; ಬಿಜೆಪಿ ಮಾಜಿ ಶಾಸಕ, ಆರ್ಎಸ್ಎಸ್ ಕಟ್ಟಾಳು ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್
ತುಮಕೂರು: ಈ ಬಾರಿಯ ಚುನಾವಣಾ ಹತ್ತಿರವಾಗುತ್ತಿದ್ದಂತೆಯೇ ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಜಿಗಿಯುವ ಪಕ್ಷಾಂತರ ಪರ್ವ ಆರಂಭವಾಗಿದ್ದು, ಬಿಜೆಪಿ ಮಾಜಿ ಶಾಸಕ, ಆರ್ಎಸ್ಎಸ್ ಕಟ್ಟಾಳು ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ.
ಕೆಲವು ದಿನಗಳ ಹಿಂದೆಯಷ್ಟೇ ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಆಪ್ತ ತಮ್ಮಯ್ಯ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಗೆ ತೀರ್ಮಾನಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ಮಾಜಿ ಶಾಸಕ, ಆರ್ಎಸ್ಎಸ್ ಕಟ್ಟಾಳು ಕಿರಣ್ ಕುಮಾರ್ ಅವರು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿರುವುದು ಕಮಲ ಪಾಳಯದಲ್ಲಿ ತಳಮಳಕ್ಕೆ ಕಾರಣವಾಗಿದೆ.
ಈಗ ಜೈವಿಕ ಇಂಧನ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾಗಿರುವ ಕಿರಣ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜೀನಾಮೆಗೆ ವೈಯಕ್ತಿಕ ಕಾರಣ, ಸ್ವಇಚ್ಚೆಯಿಂದ ಎಂಬ ಸಮೂಬು ನೀಡಲಾಗಿದೆ.ನೀಡುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಕಿರಣ್ ಕುಮಾರ್ ಅವರು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ BJP ಟಿಕೆಟ್ ಆಕಾಂಕ್ಷಿಯಾಗಿದ್ದು, ಈ ಕ್ಷೇತ್ರದಲ್ಲಿ ಮಾಧುಸ್ವಾಮಿ ಇರುವುದರಿಂದ ಟಿಕೆಟ್ ಸಿಗುವುದು ಕಷ್ಟ ಅಸಾಧ್ಯ ಎಂಬುದನ್ನು ಅರಿತು ಕಾಂಗ್ರೆಸ್ ಸೇರ್ಪಡೆಗೆ ತೀರ್ಮಾನಿಸಿದ್ದಾರೆ ಎಂದು ಹೇಳಲಾಗಿದೆ. ಫೆ.20ರಂದು ಅಧಿಕೃತವಾಗಿ ಕಿರಣ್ ಕುಮಾರ್ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.