
ನಾಳೆ ಮೋದಿ ಬೆಂಗಳೂರಿಗೆ; ಕಾರ್ಯಕ್ರಮಕ್ಕೆ 1,500 ವಿದ್ಯಾರ್ಥಿಗಳನ್ನು ರವಾನಿಸುವಂತೆ ವಿವಿಧ ವಿವಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ !
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ( ಫೆ.6ರಂದು) ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಗ್ರೀನ್ ಮೊಬಿಲಿಟಿ ರಾಲಿಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ 1000-1,500 ವಿದ್ಯಾರ್ಥಿಗಳ ರವಾನಿಸುವಂತೆ ನಗರದ 6 ವಿಶ್ವವಿದ್ಯಾಲಯಗಳಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ ನೀಡಿದೆ ಎಂದು ಹೇಳಲಾಗಿದೆ.
ಮೋದಿ ನಾಳೆ ಬೆಂಗಳೂರಿನಲ್ಲಿ ಇಂಡಿಯಾ ಎನರ್ಜಿ ವೀಕ್ 2023ಕ್ಕೆ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ ಇ20 ಇಂಧನ ಲೋಕಾರ್ಪಣೆ, ಗ್ರೀನ್ ಮೊಬಿಲಿಟಿ ರಾಲಿಗೆ ಚಾಲನೆ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.
ನಾಳೆ ಬೆಂಗಳೂರಿಗೆ ಆಗಮಿಸಿರುವ ಮೋದಿಯವರು ಗ್ರೀನ್ ಮೊಬಿಲಿಟಿ ರಾಲಿಗೆ ಚಾಲನೆ ನೀಡಲಿದ್ದಾರೆ. ಈ ರಾಲಿಯು 42 ಕಿ.ಮೀ ರಸ್ತೆಯವರೆಗೂ ನಡೆಯಲಿದ್ದು, ರಾಲಿಯಲ್ಲಿ 1,000-1,5000 ವಿದ್ಯಾರ್ಥಿಗಳನ್ನು ಕಳುಹಿಸುವಂತೆ ವಿವಿಗಳಿಗೆ ಶಿಕ್ಷಣ ಇಲಾಖೆ ಮನವಿ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.
ಈ ರಾಲಿಗೆ ವಿದ್ಯಾರ್ಥಿಗಳನ್ನು ಕಳುಹಿಸಲು ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯಗಳು, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ನೃಪತುಂಗ ವಿಶ್ವವಿದ್ಯಾಲಯ ಹಾಗು ಯುವಿಸಿಇಗೆ ಸೂಚಿಸಿದೆ ಎಂದು ತಿಳಿದುಬಂದಿದೆ.