
ಬೆಂಗಳೂರಿನಲ್ಲಿ 'ಇಂಡಿಯಾ ಎನರ್ಜಿ ವೀಕ್ - 2023' ಚಾಲನೆ ನೀಡಿದ ಪ್ರಧಾನಿ ಮೋದಿ
ಬೆಂಗಳೂರು(Headlines Kannada): ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಂಗಳೂರು ನೆಲಮಂಗಲ ಹತ್ತಿರದ ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಅಯೋಜಿಸಲಾಗಿರುವ ಇಂಡಿಯಾ ಎನರ್ಜಿ ವೀಕ್ - 2023 ನ್ನು ಉದ್ಘಾಟಿಸಿದರು.
ಬೆಂಗಳೂರಿನ ಎಚ್ಎಎಲ್ನಿಂದ ಮಾದಾವರದಲ್ಲಿರುವ ಬಿಐಇಸಿ (ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ)ಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ಸೋಮವಾರ ಆಗಮಿಸಿದರು.
ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಸ್ವಾಗತ ಕೋರಿದರು.
ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಇಂದಿನಿಂದ ಫೆ.8ರವರೆಗೆ ಇಂಧನ ಸಪ್ತಾಹ ಆಯೋಜಿಸಲಾಗುತ್ತಿದೆ. ಭಾರತ ಇಂಧನ ಸಪ್ತಾಹದಲ್ಲಿ 30,000ಕ್ಕೂ ಹೆಚ್ಚು ಪ್ರತಿನಿಧಿಗಳು, 500ಕ್ಕೂ ಹೆಚ್ಚು ಸಂಪನ್ಮೂಲ ವ್ಯಕ್ತಿಗಳು ಭಾರತದ ಇಂಧನ ಭವಿಷ್ಯ ಕುರಿತ ಸವಾಲುಗಳು ಮತ್ತು ಅವಕಾಶಗಳ ಬಗ್ಗೆ ಚರ್ಚಿಸಲಿದ್ದಾರೆ.
ಇದಕ್ಕೂ ಮುನ್ನ ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ರಾಜ್ಯಪಾಲರಾದ ಡಾ. ತಾವರಚಂದ್ ಗೆಹಲೋಟ್ ಹಾಗೂ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಹರ್ದೀಪ್ ಸಿಂಗ್ ಪುರಿಯವರು ಉಪಸ್ಥಿತರಿದ್ದರು.