RSS ಮುಖ್ಯಸ್ಥ ಮೋಹನ್ ಭಾಗವತ್'ರಿಂದ ಬ್ರಾಹ್ಮಣರ ಅ#ವಹೇಳನ: ಬಿಹಾರ ನ್ಯಾಯಾಲಯದಲ್ಲಿ ದೂರು ದಾಖಲು

RSS ಮುಖ್ಯಸ್ಥ ಮೋಹನ್ ಭಾಗವತ್'ರಿಂದ ಬ್ರಾಹ್ಮಣರ ಅ#ವಹೇಳನ: ಬಿಹಾರ ನ್ಯಾಯಾಲಯದಲ್ಲಿ ದೂರು ದಾಖಲು

ಮುಜಾಫರ್‌ಪುರ: ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ RSS ಮುಖ್ಯಸ್ಥ ಮೋಹನ್ ಭಾಗವತ್ ಅವರು ಬ್ರಾಹ್ಮಣರನ್ನು ಅ#ವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಮಂಗಳವಾರ ಬಿಹಾರ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ.

ಮುಂಬೈನಲ್ಲಿ ರವಿವಾರ ನಡೆದ ಸಮಾರಂಭವೊಂದಲ್ಲಿ ಭಾಗವಹಿಸಿದ್ದ ಮೋಹನ್ ಭಾಗವತ್ ಅವರ ಭಾಷಣದ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ವಕೀಲ ಸುಧೀರ್ ಕುಮಾರ್ ಓಜಾ ಅವರು ಮುಜಾಫರ್‌ಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯವು ಈ ತಿಂಗಳ 20 ರಂದು ವಿಚಾರಣೆಯನ್ನು ಕೈಗೊಳ್ಳಲಿದೆ.

ಮರಾಠಿಯಲ್ಲಿ ಮಾಡಿದ ತಮ್ಮ ಭಾಷಣದಲ್ಲಿ ಮೋಹನ್ ಭಾಗವತ್ ಅವರು, ಹಿಂದೂ ಸಮಾಜದಲ್ಲಿ ದೇವರು ಜಾತಿಗಳನ್ನು ಸೃಷ್ಟಿಸಿಲ್ಲ, ಬದಲಾಗಿ ಪುರೋಹಿತರಿಂದಲೇ  ಜಾತಿಗಳು ಸೃಷ್ಟಿಯಾಗಿರುವುದು ಎಂದು ಹೇಳಿದ್ದರು.

BJP ಮಾತೃಸಂಸ್ಥೆಯಾದ ಆರ್‌ಎಸ್‌ಎಸ್, ಭಾಗವತ್ ಅವರು ಯಾವುದೇ ನಿರ್ದಿಷ್ಟ ಜಾತಿಯನ್ನು ಉಲ್ಲೇಖಿಸಿಲ್ಲ ಹಾಗು ಪುರೋಹಿತರು ಎಂಬ ಪದದಿಂದ ಅವರು ಜಾತಿ ವ್ಯವಸ್ಥೆಯನ್ನು ಸೃಷ್ಟಿಸಿದ ಹಿಂದಿನ ವಿದ್ವಾಂಸರನ್ನು ಸೂಚಿಸಿದ್ದಾರೆ ಎಂದು ಹೇಳಿಕೆ ನೀಡಿದೆ.

Ads on article

Advertise in articles 1

advertising articles 2

Advertise under the article