ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿ#ಧನ
Sunday, February 5, 2023
ಇಸ್ಲಾಮಾಬಾದ್: ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ರವಿವಾರ ನಿ#ಧನರಾಗಿದ್ದಾರೆ.
ರಾವಲಪಿಂಡಿಯ ಸೇನಾ ಪಡೆ ಆಸ್ಪತ್ರೆಯೊಂದರಲ್ಲಿ ಕೊ#ನೆ ಉಸಿರೆಳೆದಿರುವ ಅವರಿಗೆ 78 ವರ್ಷ ವಯಸ್ಸಾಗಿತ್ತು. ಮುಷರಫ್ ಅವರು ಅಮಿಲೋಡೋಸಿಸ್ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, 2016ರಿಂದ ದುಬೈನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗಷ್ಟೇ ಅವರನ್ನು ಪಾಕಿಸ್ತಾನದ ರಾವಲ್ಪಿಂಡಿ ನಗರದಲ್ಲಿರುವ ಆರ್ಮ್ಡ್ ಫೋರ್ಸಸ್ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ನಿ#ಧನರಾಗಿದ್ದಾರೆ.