ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಮುಖಂಡರಿಂದ ಮಹತ್ವದ ಸಭೆ; ಸಭೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಇನಾಯತ್ ಅಲಿ, ಮೊಹಿದೀನ್ ಬಾವ
ಮಂಗಳೂರು(Headlines Kannada): ಇಲ್ಲಿನ ತಾಜ್ ಗೇಟ್ ವೇ ಹೋಟೆಲ್ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಮುಸ್ಲಿಂ ಮುಖಂಡರ ಮಹತ್ವದ ಸಭೆ ನಡೆಯಿತು.
ಸಭೆಯಲ್ಲಿ ಪ್ರಮುಖವಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರದಲ್ಲಿನ ಗೊಂದಲದ ಬಗ್ಗೆ ಹಾಗೂ ಜಿಲ್ಲೆಯಲ್ಲಿ ಸಮುದಾಯ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಯಿತು.
ಈ ಸಂಧರ್ಭದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಟಿಕೆಟ್ ಆಕಾಂಕ್ಷಿಗಳಾದ ಮಾಜಿ ಶಾಸಕ ಮೊಹಿದೀನ್ ಬಾವ ಹಾಗೂ ಇನಾಯತ್ ಅಲಿ ಅವರು ಮಾತನಾಡಿ ಹೈಕಮಾಂಡ್ ಈರ್ವರಲ್ಲಿ ಯಾರಿಗೆ ಟಿಕೆಟ್ ನೀಡಿದರೂ ನಾವು ಗೆಲುವಿಗಾಗಿ ಒಗ್ಗಟ್ಟಿನಿಂದ ನಿಸ್ವಾರ್ಥವಾಗಿ ದುಡಿಯುತ್ತೇವೆ ಎನ್ನುವ ಮೂಲಕ ಒಗ್ಗಟ್ಟಿನ ಮಂತ್ರ ಜಪಿಸಿದರು. ಇದರಿಂದ ಟಿಕೆಟ್ ವಿಚಾರದಲ್ಲಿನ ಗೊಂದಲ, ಜಂಜಾಟಕ್ಕೆ ಬಹುತೇಕ ತಾರ್ಕಿಕ ಅಂತ್ಯ ಕಂಡಂತಾಗಿದೆ.
ಸಭೆಯಲ್ಲಿ ಕಾಂಗ್ರೆಸ್ ನಾಯಕ .ಟಿ. ಖಾದರ್, ಡಾ.ಯೆನಪೋಯ ಅಬ್ದುಲ್ಲ ಕುಂಞಿ, ಕೆ.ಎಸ್. ಮೊಹಮ್ಮದ್ ಮಸೂದ್ ಸಹಿತ ಮುಸ್ಲಿಂ ಸಮುದಾಯದ ಪ್ರಮುಖ ರಾಜಕೀಯ, ಸಾಮಾಜಿಕ ಮುಖಂಡರು ಭಾಗವಹಿಸಿದ್ದರು.