ನಿವೃತ್ತ ನ್ಯಾ.ಅಬ್ದುಲ್ ನಜೀರ್'ರನ್ನು ರಾಜ್ಯಪಾಲರನ್ನಾಗಿ ಮಾಡಿರುವುದು ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧ#ಕ್ಕೆ: ಕಾಂಗ್ರೆಸ್ ಕಿಡಿ
ನವದೆಹಲಿ: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಿರುವ ಕೇಂದ್ರ ಸರಕಾರದ ನಿಲುವಿನ ಕುರಿತು ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದ್ದು, ಇದು ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧ#ಕ್ಕೆ ತಂದಿದೆ ಎಂದು ಹೇಳಿದೆ.
ಈ ಬಗ್ಗೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಘ್ವಿ, BJP ನೇತೃತ್ವದ ಕೇಂದ್ರ ಸರ್ಕಾರಕ್ಕೆ ತನ್ನದೇ ಆದ ದಿವಂಗತ ನಾಯಕ, ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರ ಹೇಳಿಕೆಯನ್ನು ಮುಂದಿಟ್ಟುಕೊಂಡು, ನಿವೃತ್ತಿ ನಂತರ ದೊರಕುವ ಹುದ್ದೆಗಳು, ನಿವೃತ್ತಿಗೂ ಮೊದಲು ನೀಡಲಾಗುವ ತೀರ್ಪುಗಳ ಮೇಲೆ ಪ್ರಭಾವ ಬೀರುತ್ತವೆ ಎಂದು ಜೇಟ್ಲಿ ಹೇಳಿದ್ದನ್ನು ಈ ವೇಳೆ ನೆನಪಿಸಿಡ್ಕೊಂಡಿದ್ದಾರೆ.
BJP ಉನ್ನತ ನಾಯಕರಲ್ಲಿ ಒಬ್ಬರಾದ ಅರುಣ್ ಜೇಟ್ಲಿ ಅವರು, ಸೆಪ್ಟೆಂಬರ್ 5, 2013 ರಂದು ಸದನದಲ್ಲಿ ಹಾಗು ಹೊರಗೆ ಹಲವಾರು ಬಾರಿ, ನಿವೃತ್ತಿಯ ನಂತರದ ಹುದ್ದೆಯ ಬಯಕೆಯು ನಿವೃತ್ತಿಯ ಪೂರ್ವ ತೀರ್ಪುಗಳ ಮೇಲೆ ಪ್ರಭಾವ ಬೀರುತ್ತವೆ ಎಂದು ಹೇಳಿದ್ದರು. ಇದು ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧ#ಕ್ಕೆ ತಂದಿದೆ ಎಂದು ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಿರುವುದಕ್ಕೆ ಅಭಿಷೇಕ್ ಮನು ಸಿಂಘ್ವಿ ವಿರೋಧ ವ್ಯಕ್ತಪಡಿಸಿದ್ದಾರೆ.