ಐಪಿಎಸ್ ರೂಪಾ-ಐಎಎಸ್ ರೋಹಿಣಿ ಮಧ್ಯೆಗಿನ ನಿಲ್ಲದ ಜಗಳ; ಮುಜುಗರಕ್ಕೀಡಾದ ಸರಕಾರ; ಇಬ್ಬರು ಅಧಿಕಾರಿಗಳ ವರ್ಗಾವಣೆ

ಐಪಿಎಸ್ ರೂಪಾ-ಐಎಎಸ್ ರೋಹಿಣಿ ಮಧ್ಯೆಗಿನ ನಿಲ್ಲದ ಜಗಳ; ಮುಜುಗರಕ್ಕೀಡಾದ ಸರಕಾರ; ಇಬ್ಬರು ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮಧ್ಯೆಗಿನ ಜಗಳದಿಂದ ತೀವ್ರ ಮುಜುಗರಕ್ಕೀಡಾದ ರಾಜ್ಯ ಸರಕಾರ, ಇಅಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. 

ಕಳೆದೆರೆಡು ದಿನಗಳಿಂದ ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕಿತ್ತಾಡಿಕೊಂಡಿದ್ದು, ಇದು ರಾಜ್ಯ ಸರಕಾರಕ್ಕೆ ತೀವ್ರ ಮುಜುಗರದ ಜೊತೆಗೆ, ಇಕ್ಕಟ್ಟು ಸೃಷ್ಟಿಸಿತ್ತು. ಈ ಬಗ್ಗೆ ಸರಕಾರ ನಿನ್ನೆಯೇ ಎಚ್ಚರಿಕೆ ನೀಡಿದ್ದರೂ ಕಿತ್ತಾಟ ನಿಂತಿಲ್ಲ. ಈ ಹಿನ್ನಲೆಯಲ್ಲಿ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಡಿ.ರೂಪಾ ಅವರ ಪತಿ, ಐಎಎಸ್​ ಅಧಿಕಾರಿ ಮೌನೀಶ್ ಮೌದ್ಗಿಲ್ ಅವರನ್ನೂ ಕೂಡ  ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಸಿಬ್ಬಂದಿ ಹಾಗು ಆಡಳಿತ ಸುಧಾರಣೆ ಇಲಾಖೆ(ಡಿಪಿಆರ್)ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ನಿನ್ನೆಯಷ್ಟೇ ರೂಪಾ ಹಾಗು ರೋಹಿಣಿ ಅವರಿಗೆ ಎಚ್ಚರಿಕೆ ನೀಡಿದ್ದ ಸರ್ಕಾರ, ಇಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಹಾಗೂ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಡಿ. ರೂಪಾ ಅವರಿಗೆ ಯಾವುದೇ ಹುದ್ದೆ ನೀಡದೆ ಸರಕಾರ ವರ್ಗಾವಣೆ ಮಾಡಿದೆ.

ಧಾರ್ಮಿಕ ದತ್ತಿ ಇಲಾಖೆಯ ಆಯಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರ ತೆರವಾದ ಸ್ಥಾನಕ್ಕೆ ಬಸವರಾಜೇಂದ್ರ ಎಚ್‌ ಅವರನ್ನು ನೇಮಕ ಮಾಡಲಾಗಿದ್ದು, ಡಿ.ರೂಪಾ ಅವರ ತೆರವಾದ ಸ್ಥಾನಕ್ಕೆ ಭಾರತಿ.ಡಿ ಎಂಬುವವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Ads on article

Advertise in articles 1

advertising articles 2

Advertise under the article