ಎಸ್‌ಡಿಪಿಐ ಕಚೇರಿಗಳ ಮೇಲೆ ದಾ#ಳಿ ನಡೆಸಲು ಕೇಂದ್ರ ಸರ್ಕಾರದ ನಿರ್ದೇಶನವಿತ್ತೇ..?; ದಾಖಲೆ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ ಹೈಕೋರ್ಟ್

ಎಸ್‌ಡಿಪಿಐ ಕಚೇರಿಗಳ ಮೇಲೆ ದಾ#ಳಿ ನಡೆಸಲು ಕೇಂದ್ರ ಸರ್ಕಾರದ ನಿರ್ದೇಶನವಿತ್ತೇ..?; ದಾಖಲೆ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ ಹೈಕೋರ್ಟ್

 

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಚೇರಿಗಳ ಮೇಲೆ ದಾ#ಳಿ ನಡೆಸಲು ಕೇಂದ್ರ ಸರ್ಕಾರದ ನಿರ್ದೇಶನವಿತ್ತೇ..? ಎಂದು ಪ್ರಶ್ನಿಸಿರುವ  ಕರ್ನಾಟಕ ಹೈಕೋರ್ಟ್, ಈ ಕುರಿತಾದ ದಾಖಲೆಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಈಗಾಗಲೇ ದಾಳಿ ನಡೆಸಿ, ಜಪ್ತಿ ಮಾಡಿರುವ ಸ್ವತ್ತುಗಳಿಗೆ ಹಾಕಲಾಗಿರುವ ಮೊಹರು ತೆರವುಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ನಿರ್ದೇಶಿಸುವಂತೆ ಕೋರಿ ಎಸ್‌ಡಿಪಿಐನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಸಲ್ಲಿಸಿರುವ ಅರ್ಜಿಯನ್ನು ಬುಧವಾರ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲರು, ಪೂರ್ವ ಸೂಚನೆ ನೀಡದೆ ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಡಿಪಿಐನ 17 ಕಚೇರಿಗಳಿಗೆ ಬೀಗ ಜಡಿಯಲಾಗಿದೆ. ಜಿಲ್ಲಾಡಳಿತ ಸೀಲ್ ಹಾಕಿದ್ದರೂ ಕಚೇರಿಗಳಿದ್ದ ಜಾಗಗಳಿಗೆ ಬಾಡಿಗೆ ಕಟ್ಟುತ್ತಿದ್ದೇವೆ. ಮುಂಬರಲಿರುವ ವಿಧಾನಸಭೆ ಚುನಾವಣೆಗೆ SDPI ಸಿದ್ಧತೆ ನಡೆಸಬೇಕಿದ್ದು, ಕಚೇರಿಗಳನ್ನು ಬಂದ್ ಮಾಡಿರುವುದರಿಂದ ಯಾವುದೇ ರಾಜಕೀಯ ಕಾರ್ಯಕ್ರಮ ನಡೆಸಲಾಗುತ್ತಿಲ್ಲ. ಆದ್ದರಿಂದ, ಸೀಲ್‌ಗಳನ್ನು ತೆರವು ಮಾಡಲು ಜಿಲ್ಲಾಡಳಿತಕ್ಕೆ ನಿರ್ದೇಶಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.

ಎಸ್‌ಡಿಪಿಐ ಬೇಡಿಕೆಗೆ ವಿರೋಧ ವ್ಯಕ್ತಪಡಿಸಿದ ಸರ್ಕಾರದ ಪರ ವಕೀಲರು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ#ಎಫ್ಐ) ಯನ್ನು ಕೇಂದ್ರ ಸರಕಾರ ನಿ#ಷೇಧಿಸಿದೆ. SDPI ಕಚೇರಿಗಳಲ್ಲಿ ಪಿ#ಎಫ್‌ಐಗೆ ಸಂಬಂಧಿಸಿದ ಸಾಮಗ್ರಿಗಳು ಪತ್ತೆಯಾಗಿವೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಆದರೂ, ಅರ್ಜಿದಾರರು ಕೇಂದ್ರ ಸರ್ಕಾರವನ್ನು ಪ್ರತಿವಾದಿಗಳನ್ನಾಗಿ ಮಾಡಿಲ್ಲ  ಎಂದು ಅವರು ಹೇಳಿದರು.

ಈ ವೇಳೆ ವಾದ-ಪ್ರತಿವಾದ ಆಲಿಸಿದ ಪೀಠವು, ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನ ಕುರಿತ ದಾಖಲೆಗಳನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಒದಗಿಸುವಂತೆ ಸರ್ಕಾರದ ಪರ ವಕೀಲರಿಗೆ ಸೂಚಿಸಿ, ಅರ್ಜಿ ವಿಚಾರಣೆಯನ್ನು ಇದೇ ತಿಂಗಳ(ಫೆಬ್ರವರಿ) 16ಕ್ಕೆ ಮುಂದೂಡಿತು.

Ads on article

Advertise in articles 1

advertising articles 2

Advertise under the article