ಪುತ್ತೂರು ಎಸ್‌ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಕಣಕ್ಕೆ! ಜೈ#ಲಿನಿಂದಲೇ ಸ್ಪರ್ಧೆ
Monday, February 13, 2023
ಮಂಗಳೂರು: ಪ್ರವೀಣ್ ನೆಟ್ಟಾರು ಕೊ#ಲೆ ಪ್ರಕರಣದಲ್ಲಿ ಬಂಧಿತರಾಗಿರುವ ಶಾಫಿ ಬೆಳ್ಳಾರೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಎಸ್‌ಡಿಪಿಐ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಶಾಫಿ ಬೆಳ್ಳಾರೆ ಅವರು ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಬಗ್ಗೆ ಎಸ್‌ಡಿಪಿಐ ಕಾರ್ಯಕರ್ತರ ಸಮಾವೇಶದಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಜ್ ಪರಂಗಿಪೇಟೆ, ನಮ್ಮದು ಸಂವಿಧಾನವನ್ನು ಒಪ್ಪಿಕೊಂಡ ಪಕ್ಷ. ಚುನಾವಣಾ ಆಯೋಗದ ಅಧಿನಿಯಮದಂತೆ ಅಭ್ಯರ್ಥಿ ಘೋಷಣೆ ಮಾಡಲಾಗಿದ್ದು, ಜೈಲಿನಲ್ಲಿರುವ ಆರೋಪಿತ ವ್ಯಕ್ತಿ ಚುನಾವಣೆಗೆ ನಿಲ್ಲಬಾರದು ಎಂದು ಎಲ್ಲೂ ಹೇಳಿಲ್ಲ. ಈಗಾಗಲೇ ಹಲವಾರು ಜನ ಜೈಲಿನಲ್ಲಿ ಇದ್ದುಕೊಂಡೇ ಚುನಾವಣೆಗೆ ಸ್ಪರ್ಧಿಸಿದ್ದಾರೆ ಎಂದಿದ್ದಾರೆ.
ಪುತ್ತೂರು ಕ್ಷೇತ್ರದಿಂದ ಶಾಫಿ ಬೆಳ್ಳಾರೆಯನ್ನು ಕಣಕ್ಕಿಳಿಸಲು ತಯಾರಿ ನಡೆಯುತ್ತಿದ್ದು, ಶಾಫಿ ಬೆಳ್ಳಾರೆ ಕಣಕ್ಕಿಳಿದರೆ ಕಾಂಗ್ರೆಸ್'ಗೆ ಈ ಕ್ಷೇತ್ರದಲ್ಲಿ ಮುಳುವಾಗುವ ಸಾಧ್ಯತೆ ಇದೆ.
ಪ್ರವೀಣ್ ನೆಟ್ಟಾರ್ ಹ#ತ್ಯೆ ಪ್ರಕರಣದಲ್ಲಿ ಜೈ#ಲಿನಲ್ಲಿರುವ ಶಾಫಿ ಬೆಳ್ಳಾರೆ SDPI ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದು, ಪುತ್ತೂರು ಭಾಗದಲ್ಲಿ ತನ್ನದೇ ಆದ ವರ್ಚಸ್ಸನ್ನು ಹೊಂದಿದ್ದಾರೆ.