ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ವರ್ಗಾವಣೆ; ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಆರ್.ಜೈನ್ ನೇಮಕ
Thursday, February 23, 2023
ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ಗುರುವಾರ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ಇಂದು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ನೇಮಕ ಮಾಡಲಾಗಿದೆ
ಇದೆ ಸಂದರ್ಭದಲ್ಲಿ ಶಶಿಕುಮಾರ್ ಸೇರಿದಂತೆ 7 ಮಂದಿ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಬೆಂಗಳೂರು ವೈರ್’ಲೆಸ್ ಎಸ್.ಪಿಯಾಗಿದ್ದ ಡಿ.ಕಿಶೋರ್ ಬಾಬು ಗುಪ್ತದಳ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆಗೊಂಡಿದ್ದರೆ, ಕೆಎಸ್ ಆರ್’ಪಿ ಬೆಂಗಳೂರು ಕಮಾಂಡೆಂಟ್ ಆಗಿರುವ ಕೆ.ವಂಶಿಕೃಷ್ಣ ಅವರನ್ನು ಬೆಂಗಳೂರು ವೈರ್’ಲೆಸ್ ಎಸ್.ಪಿಯಾಗಿ ರಾಜ್ಯ ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.