ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪರ ಹೆಸರಿಡಲು ಸರಕಾರ ನಿರ್ಧಾರ; ಮೋದಿಯಿಂದ ಉದ್ಘಾಟನೆ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪರ ಹೆಸರಿಡಲು ಸರಕಾರ ನಿರ್ಧಾರ; ಮೋದಿಯಿಂದ ಉದ್ಘಾಟನೆ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಅವರ ಹೆಸರಿಡಲು ಸರಕಾರ ನಿರ್ಧರಿಸಿದ್ದು, ಕೇಂದ್ರ ಸರ್ಕಾರಕ್ಕೆ ಈ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಎನ್​ಇಎಸ್​​ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಮುಖ್ಯಮಂತ್ರಿ, ಈ ವಿಮಾನ ನಿಲ್ದಾಣ ನಿರ್ಮಾಣ ಆಗಲು ಮುಖ್ಯ ಕಾರಣ ಬಿಎಸ್​​ವೈ ಪರಿಶ್ರಮ. ಪ್ರಧಾನಿ ನರೇಂದ್ರ ಮೋದಿ ಈ  ಏರ್​ಪೋರ್ಟ್​ ಉದ್ಘಾಟನೆ ಮಾಡ್ತಾರೆ ಎಂದರು. 

ಪ್ರಹ್ಲಾದ್ ಜೋಶಿ ಸಿಎಂ ಮಾಡಲು RSS​​​ ಹುನ್ನಾರ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ, ಜನರು ನಮ್ಮ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಮತ ಹಾಕ್ತಾರೆ. ಹೆಚ್​.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ನನಗೆ ನಂಬಿಕೆ ಇಲ್ಲ ಎಂದರು.

Ads on article

Advertise in articles 1

advertising articles 2

Advertise under the article