ಇಂದು ಮಂಡಿಸಿರುವುದು ಬಜೆಟ್ಟಾ ಅಥವಾ ದಿನಸಿ ಅಂಗಡಿ ಮಾಲೀಕನ ರಸೀದಿಯಾ?: ವ್ಯಂಗ್ಯವಾಗಿ ಪ್ರಶ್ನಿಸಿದ ಸುಬ್ರಮಣಿಯನ್ ಸ್ವಾಮಿ

ಇಂದು ಮಂಡಿಸಿರುವುದು ಬಜೆಟ್ಟಾ ಅಥವಾ ದಿನಸಿ ಅಂಗಡಿ ಮಾಲೀಕನ ರಸೀದಿಯಾ?: ವ್ಯಂಗ್ಯವಾಗಿ ಪ್ರಶ್ನಿಸಿದ ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿರುವ 2023-24ನೇ ಸಾಲಿನ ಬಜೆಟ್ ಬಗ್ಗೆ ಹಲವು ಮಂದಿ ಟೀಕೆ, ವ್ಯಂಗ್ಯ ವಿರೋಧ ವ್ಯಕ್ತಪಡಿಸಿದ್ದು, ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಕೂಡ ಸರಕಾರದ ವಿರುದ್ಧ ಚಾಟಿ ಬೀಸಿದ್ದಾರೆ.

ತಮ್ಮದೇ ಸರ್ಕಾರದ ಬಜೆಟ್ ಅನ್ನು ಟೀಕಿಸಿರುವ BJP ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ, ಇಂದು ಮಂಡಿಸಿರುವುದು ಬಜೆಟ್ಟಾ ಅಥವಾ ದಿನಸಿ ಅಂಗಡಿ ಮಾಲೀಕನ ರಸೀದಿಯಾ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

"ಇದು ಒಂದು ಮಂಡನೆ ಮಾಡಿರುವ ಬಜೆಟ್? ಇದು ದಿನಸಿ ಅಂಗಡಿ ಮಾಲೀಕನ ಬಿಲ್ಲಾ,  ಒಂದು ಯೋಗ್ಯ ಬಜೆಟ್ ತನ್ನ ಉದ್ದೇಶಗಳೇನು ಎಂಬುದನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿರುವ ಅವರು, ಅದು ಜಿಡಿಪಿ ಬೆಳವಣಿಗೆ ದರವಾಗಿದ್ದರೆ, ಹೂಡಿಕೆಯ ಮಟ್ಟ ಮತ್ತು ರಿಟರ್ನ್ ದರ, ಆದ್ಯತೆಗಳು, ಆರ್ಥಿಕ ತಂತ್ರಗಾರಿಕೆ ಮತ್ತು ಸಂಪನ್ಮೂಲ ಕ್ರೋಢೀಕರಣವನ್ನು ಬಹಿರಂಗಪಡಿಸಿ" ಎಂದು ಟ್ವೀಟ್ ಮಾಡಿದ್ದಾರೆ.

Ads on article

Advertise in articles 1

advertising articles 2

Advertise under the article