ಟರ್ಕಿ-ಸಿರಿಯಾದಲ್ಲಿ ಪ್ರಬಲ ಭೂಕಂಪ; 360 ಕ್ಕೂ ಹೆಚ್ಚು ಮಂದಿ ಸಾ#ವು; ಸಂತ್ರಸ್ತರಿಗೆ ನೆರವು ನೀಡಲು ಭಾರತ ಸಿದ್ಧ ಎಂದ ಮೋದಿ
ಅಂಕಾರಾ: ಟರ್ಕಿ ಮತ್ತು ಸಿರಿಯಾದಲ್ಲಿ ಇಂದು ಮುಂಜಾನೆ ಸಂಭವಿಸಿರುವ ಪ್ರಬಲ ಭೂಕಂಪದಿಂದ ಒಟ್ಟು 360 ಜನರು ಸಾ#ವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸೋಮವಾರ ಮುಂಜಾನೆ ದಕ್ಷಿಣ ಟರ್ಕಿಯಲ್ಲಿ ಸಂಭವಿಸಿದ ಭೂಕಂಪನದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 7.8 ದಾಖಲಾಗಿದೆ. ಟರ್ಕಿಯಲ್ಲಿ ಇದುವೆರೆಗೆ 100 ಮೃ#ತದೇಹಗಳನ್ನು ಅವಶೇಷಗಳಡಿಯಿಂದ ತೆಗೆಯಲಾಗಿದೆ. ಸುಮಾರು 440ಕ್ಕೂ ಹೆಚ್ಚು ಜನರು ಕಣ್ಮರೆಯಾಗಿದ್ದು, ಅವರಿಗಾಗಿ ಹುಡುಕಾಟ ಮುಂದುವರಿದಿದೆ. ಸುಮಾರು 130ಕ್ಕೂ ಹೆಚ್ಚು ಮನೆಗಳು ಮಲಟ್ಯಾ ಪ್ರಾಂತ್ಯವೊಂದರಲ್ಲೇ ನೆಲಸಮವಾಗಿವೆ ಎಂದು ಹೇಳಲಾಗಿದೆ.
ವಾಯುವ್ಯ ಸಿರಿಯಾದಲ್ಲಿ ಸಂಭವಿಸಿದ ಭೂಕಂಪನದಲ್ಲಿ ಹಲವಾರು ಕಟ್ಟಡಗಳು ನೆಲಸಮಗೊಂಡಿದ್ದು, ಜನರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಕಟ್ಟಡಗಳನ್ನು ತೊರೆದು, ತೆರೆದ ಖಾಲಿ ಪ್ರದೇಶದಲ್ಲಿ ಸೇರುವಂತೆ ನಾಗರಿಕರಿಗೆ ರಕ್ಷಣಾ ತಂಡಗಳು ಈಗಾಗಲೇ ಸೂಚಿವೆ.
ಟರ್ಕಿ ಸಂತ್ರಸ್ತರಿಗೆ ನೆರವು ನೀಡಲು ಭಾರತ ಸಿದ್ಧ: ಪ್ರಧಾನಿ ಮೋದಿ
ಟರ್ಕಿಯಲ್ಲಿ ಇಂದು ನಡೆದ ಭೂಕಂಪ ಸಂತ್ರಸ್ತರಿಗೆ ನೆರವು ನೀಡಲು ಭಾರತ ಸಿದ್ಧ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಟರ್ಕಿಯಲ್ಲಿ ಇಂದು ಸಂಭವಿಸಿದ ವಿನಾಶಕಾರಿ ಭೂಕಂಪವನ್ನು ನಾವೆಲ್ಲರೂ ನೋಡುತ್ತಿದ್ದೇವೆ. ಹಲವಾರು ಮಂದಿ ಸಾ#ವನ್ನಪ್ಪಿದ್ದು, ಹಾನಿಗಳು ವರದಿಯಾಗಿವೆ. ಭೂಕಂಪ ಪೀಡಿತ ಸಂತ್ರಸ್ತರ ಜೊತೆಗೆ ಭಾರತದ 140 ಕೋಟಿ ಜನರ ಸಹಾನುಭೂತಿಯಿದೆ. ಭಾರತೀಯರು ಭೂಕಂಪ ಪೀಡಿತ ಜನರೊಂದಿಗೆ ಇದ್ದು, ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಭಾರತ ಸಿದ್ಧವಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.