ಈ ಬಾರಿಯ ಚುನಾವಣೆಯಲ್ಲಿ ನಾವು 130ರಿಂದ 140 ಸ್ಥಾನ ಪಡೆಯುತ್ತೇವೆ; ನಮ್ಮ ಗೆಲುವು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಯಡಿಯೂರಪ್ಪ
Saturday, February 4, 2023
ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ BJP 130ರಿಂದ 140 ಸ್ಥಾನಗಳನ್ನು ಪಡೆಯಲಿದ್ದು, ನಮ್ಮ ಗೆಲುವು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಈಆ ಬಾರಿಯೂ ಆಡಳಿತದ ಚುಕ್ಕಾಣಿ ಹಿಡಿಯುತ್ತೇವೆ. ಅದಕ್ಕೆ ತಡೆಯೊಡ್ಡಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಕಾಂಗ್ರೆಸ್‌ನಲ್ಲಿ ನಾನೇ ಸಿಎಂ ಎಂಬ ಸಂಘರ್ಷ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ನಾಯಕ ಯಾರು? ರಾಹುಲ್ ಗಾಂಧಿ ಒಬ್ಬ ನಾಯಕರೇ ಎಂದು ಪ್ರಶ್ನಿಸಿದ ಯಡಿಯೂರಪ್ಪ, ಈ ಬಾರಿ ಗೆಲುವು ನಮ್ಮದೇ ಎಂದರು.