
ಉಡುಪಿಯ ಹಿರಿಯ ಯಕ್ಷಗಾನ ಕಲಾವಿದ ಜಂಬೂರು ರಾಮಚಂದ್ರ ಶಾನುಭಾಗ ನಿ#ಧನ
Sunday, February 5, 2023
ಉಡುಪಿ: ಉಡುಪಿಯ ಶಿರಿಯಾರ ಗ್ರಾಮದ ಹಿರಿಯ ಯಕ್ಷಗಾನ ಕಲಾವಿದ ಜಂಬೂರು ರಾಮಚಂದ್ರ ಶಾನುಭಾಗ್ ಅವರು ಇಂದು ನಿ#ಧನ ಹೊಂದಿದರು. ಅವರಿಗೆ 84ವರ್ಷ ವಯಸ್ಸಾಗಿತ್ತು.
ಮಂದಾರ್ತಿ, ಮಾರಣಕಟ್ಟೆ, ಅಮೃತೇಶ್ವರೀ, ಇಡಗುಂಜಿ, ಪೆರ್ಡೂರು, ಹಾಲಾಡಿ, ಗುಂಡುಬಾಳ, ಕಮಲಶಿಲೆ ಮೇಳವೂ ಸೇರಿದಂತೆ ಸುಮಾರು ಐದೂವರೆ ದಶಕಗಳ ಕಾಲ ಕಲಾಸೇವೆಗೈದ ಇವರು ಯಕ್ಷಗಾನ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. 13 ವರ್ಷಗಳ ಹಿಂದೆ ಯಕ್ಷಗಾನ ಕಲಾರಂಗ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿತ್ತು. ಇವರ ನಿ#ಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ಸೂಚಿಸಿದ್ದಾರೆ.