ಕಾಪು ಮಂದಾರ ಹೋಟೆಲ್ ಬಳಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಬಸ್ ಡಿಕ್ಕಿ: ಮಹಾದೇವಿ ಪ್ರೌಢಶಾಲೆ ವಿದ್ಯಾರ್ಥಿನಿ ಸಾವು
Saturday, March 11, 2023
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಮಂದಾರ ಹೋಟೆಲ್ ಬಳಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಖಾಸಗಿ ಎಕ್ಸ್'ಪ್ರೆಸ್ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಆಕೆ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಸಾವನ್ನಪ್ಪಿರುವ ವಿದ್ಯಾರ್ಥಿನಿಯನ್ನು ಕಾಪು ಮಹಾದೇವಿ ಪ್ರೌಢಶಾಲೆ 8ನೇ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ್ (13) ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ಕಾಪು ಮಂದಾರ ಹೋಟೆಲ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ಎಕ್ಸ್'ಪ್ರೆಸ್ ಬಸ್ಸೊಂದು ಡಿಕ್ಕಿ ಹೊಡೆದಿದೆ. ಈ ವೇಳೆ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ್ ಗಂಭೀರ ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾಳೆ.