ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ: ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ ಇನಾಯತ್ ಅಲಿ
Wednesday, March 1, 2023
ಮಂಗಳೂರು: ದೇಶದಲ್ಲಿ ಗೃಹಬಳಕೆ ಮತ್ತು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಗೃಹೋಪಯೋಗಿ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆಯು ಈಗಾಗಲೇ ಹೊರೆಯಲ್ಲಿರುವ ಸಾಮಾನ್ಯ ಜನರನ್ನು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ಬಿಜೆಪಿ ಸರ್ಕಾರ ಸಾಮಾನ್ಯ ಜನರ ಮೇಲೆ ತೆರಿಗೆ ವಿಧಿಸುತ್ತಿದೆಯೇ ಹೊರತು, ಅವರ ಕಷ್ಟಗಳ ಬಗ್ಗೆ ಕನಿಷ್ಠ ಕಾಳಜಿ ತೋರದಿರುವುದು ವಿಪರ್ಯಾಸ ಎಂದು ಇನಾಯತ್ ಅಲಿ ಸರಕಾರವನ್ನು ಟೀಕಿಸಿದ್ದಾರೆ.