ಗಂಜಿಮಠದಲ್ಲಿ ನಡೆದ ಕಾಂಗ್ರೆಸ್ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದ ಇನಾಯತ್ ಅಲಿ
ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಗುರುಪುರ ಮತ್ತು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಮಂಗಳವಾರ ಗಂಜಿಮಠದ ಝಾರಾ ಹಾಲ್‌ನಲ್ಲಿ ಆಯೋಜಿಸಿದ್ದ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭಾಗವಹಿಸಿ ಮಾತನಾಡಿದರು.
ಈ ವೇಳೆ ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಜಬ್ಬಾರ್ ಅವರು ಇದ್ದರು. ಅವರ ಜೊತೆಗೆ ಎಐಸಿಸಿ ಅಲ್ಪಸಂಖ್ಯಾತ ಘಟಕ ಸಂಯೋಜಕಿ ಶ್ರೀಮತಿ ಜೀನಲ್ ಗಾಲಾ, ವಿಧಾನಸಭಾ ವಿಪಕ್ಷ ಉಪನಾಯಕರಾದ UT ಖಾದರ್, ಕೆಪಿಸಿಸಿ ಉಪಾಧ್ಯಕ್ಷರಾದ ಐವನ್ ಡಿಸೋಜ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಉಪಾಧ್ಯಕ್ಷ ಮುದಬ್ಬರ್ ಅಹ್ಮದ್ ಖಾನ್ ಅವರು ಇದ್ದರು. ಇವರೊಂದಿಗೆ ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಪ್ರಧಾನ ಕಾರ್ಯದರ್ಶಿಗಳಾದ ಇರ್ಷಾದ್ ಅಹ್ಮದ್ ಶೇಖ್, ಮಹಮ್ಮದ್ ಸಿರಾಜ್, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಉಮೇಶ್ ದಂಡಕೇರಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಂದ್ರ ಕಂಬಳಿ ಅವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.