ಸ್ನೇಹಿತನೊಂದಿಗಿದ್ದ ಯುವತಿಯನ್ನು ಕಾರಿನಲ್ಲಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ 4 ಮಂದಿ ಯುವಕರ ಬಂಧನ

ಸ್ನೇಹಿತನೊಂದಿಗಿದ್ದ ಯುವತಿಯನ್ನು ಕಾರಿನಲ್ಲಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ 4 ಮಂದಿ ಯುವಕರ ಬಂಧನ

ಬೆಂಗಳೂರು: ಪಾರ್ಕೊಂದರಲ್ಲಿ ತನ್ನ ಸ್ನೇಹಿತನೊಂದಿಗಿದ್ದ  ಯುವತಿಯನ್ನು ಎಳೆದೊಯ್ದ ನಾಲ್ಕು ಮಂದಿ, ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಕೋರಮಂಗಲ ಠಾಣಾ ವ್ಯಾಪ್ತಿಯ ನ್ಯಾಷನಲ್ ಗೇಮ್ಸ್ ವಿಲೇಜ್​​​​ ಪಾರ್ಕ್​ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಸತೀಶ್, ವಿಜಯ್, ಶ್ರೀಧರ್, ಕಿರಣ್ ಎಂಬುವವರು ಈ ಕೃತ್ಯವೆಸಗಿದ್ದು, ಅತ್ಯಾಚಾರ ಮಾಡಿದ ನಂತರ ಯುವತಿಯನ್ನು ರಸ್ತೆಯಲ್ಲಿ ಎಸೆದುಹೋಗಿದ್ದಾರೆ.

ಮಾರ್ಚ್ 25ರ ರಾತ್ರಿ 10 ಗಂಟೆಗೆ ಈ ಘಟನೆ  ನಡೆದಿದ್ದು, ಸರ್ಕಾರಿ ನೌಕರರು ಇರುವ ನ್ಯಾಷನಲ್ ಗೇಮ್ಸ್ ವಿಲೇಜ್​​​​ ಪಾರ್ಕ್​ನಲ್ಲಿ ಯುವತಿ ಹಾಗೂ ಆಕೆಯ ಸ್ನೇಹಿತ ಕುಳಿತುಕೊಂಡಿದ್ದ ವೇಳೆ ಈ ಕೃತ್ಯ ಎಸಗಲಾಗಿದೆ. ಈ ವೇಳೆ ಅಲ್ಲಿಗೆ ಬಂದ ನಾಲ್ವರು ಯುವಕರು ಆಕೆಯ ಸ್ನೇಹಿತನನ್ನು ಹೆದರಿಸಿ, ಬೆದರಿಸಿ, ಯುವತಿಯನ್ನು ಎಳೆದೊಯ್ದು ಚಲಿಸುತ್ತಿದ್ದ ಕಾರಿನಲ್ಲಿ ನಾಲ್ಕು ಮಂದಿ ಸೇರಿ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ರಾತ್ರಿ ವೇಳೆ ಯುವತಿಯನ್ನು ಎಳೆದೊಯ್ದ ಕಟುಕರು, ಸಾಮೂಹಿಕ ಅತ್ಯಾಚಾರ ನಡೆಸಿ, ಬೆಳಗಿನ ಜಾವ 4 ಗಂಟೆಗೆ ಆಕೆಯನ್ನು ಬಿಟ್ಟುಹೋಗಿದ್ದಾರೆ. ಈ ಕಟುಕರು ಯುವತಿಯನ್ನು  ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ಈ ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಕಾರಿನಲ್ಲಿ ಸುತ್ತಾಟ ನಡೆಸಿ ಕೃತ್ಯವೆಸಗಿದ್ದಾರೆ. ಅನಂತರ ಮಾ.26ರ ಬೆಳಗ್ಗೆ 4 ಗಂಟೆಗೆ ಯುವತಿಯನ್ನು ಮನೆ ಬಳಿ ಎಸೆದು ಪರಾರಿಯಾಗಿದ್ದರು ಎಂದು ಆರೋಪಿಸಲಾಗಿದೆ.

ಈ ಕೃತ್ಯದ ಬಳಿಕ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಳು. ಪೊಲೀಸರು ಇದೀಗ ನಾಲ್ವರು ಆರೋಪಿಗಳಾದ ಸತೀಶ್, ವಿಜಯ್, ಶ್ರೀಧರ್, ಕಿರಣ್ ಎಂಬುವವರನ್ನ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.


Ads on article

Advertise in articles 1

advertising articles 2

Advertise under the article