ಆಮ್ ಆದ್ಮಿ ಪಕ್ಷ ಬಿಟ್ಟು ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿ ಸೇರಿದ ಭಾಸ್ಕರ್ ರಾವ್
Wednesday, March 1, 2023
ಬೆಂಗಳೂರು: ಆಮ್ ಆದ್ಮಿ ಪಕ್ಷ ಸೇರಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆ ಪಕ್ಷ ತೊರೆದು ಬುಧವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಅಧಿಕೃತವಾಗಿ ಪಕ್ಷ ಸೇರಿದರು. ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಭಾಸ್ಕರ್ ರಾವ್ ಅವರನ್ನು ನಳಿನ್ ಕುಮಾರ್ ಕಟೀಲ್ ಬರಮಾಡಿಕೊಂಡರು. ಭಾಸ್ಕರ್ ರಾವ್ ಜೊತೆ ಅವರ ಬೆಂಬಲಿಗರು BJP ಸೇರಿದರು.
ಬಳಿಕ ಮಾತನಾಡಿದ ಭಾಸ್ಕರ್ ರಾವ್, AAP ಪಕ್ಷ ಕರ್ನಾಟಕದಲ್ಲಿ ಅದರ ಕಾರ್ಯವೈಖರಿ ಶೈಲಿಯಿಂದ ಬೆಳೆಯಲು ಸಾಧ್ಯವಾಗುತ್ತಿಲ್ಲ. ಈಗ ನಾನು ಸನಾತನ ಧರ್ಮದ ಪಕ್ಷ, ರಾಷ್ಟ್ರೀಯತೆಯನ್ನ ಅಳವಾಗಿ ಮೈಗೂಡಿಸಿಕೊಂಡಿರುವ BJP ಸೇರ್ಪಡೆಯಾಗಿದ್ದೇನೆ ಎಂದರು.